ಬೆಂಗಳೂರು : ಗ್ರಾಮೀಣ ಪ್ರದೇಶದಲ್ಲಿ ರೈತ ಯುವಕರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 10 ಲಕ್ಷ ರೂ.ಪ್ರೋತ್ಸಾಹಧನ ನೀಡಬೇಕು ಎಂದು ಹಸಿರು ಪ್ರತಿಷ್ಠಾನ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಸರಿ ಪ್ರತಿಷ್ಠಾನದ ಅಧ್ಯಕ್ಷ ಕೆ.ಜಿ.ಕುಮಾರ್, ದೇಶಕ್ಕೆ ಸೈನಿಕನ ಪಾತ್ರ ಎಷ್ಟು ಮುಖ್ಯವೋ ಅದೇ ರೀತಿ ದೇಶಕ್ಕಾಗಿ ಆಹಾರ ಉತ್ಪಾದನೆ ಮಾಡುವ ಕೃಷಿಕನ ಪಾತ್ರವೂ ಮಹತ್ವವಾದದ್ದು, ಹೀಗಾಗಿ ಮುಂದಿನ ಅಧಿವೇಶನದಲ್ಲಿ ರೈತಾಪಿ ಯುವಕರನ್ನು ವಿವಾಹವಾಗುವ ಹೆಣ್ಣು ಮಕ್ಕಳಿಗೆ 10 ಲಕ್ಷ ರೂ. ಪ್ರೋತ್ಸಾಹಧನ ಸೇರಿದ ವಿಶೇಷ ಪ್ಯಾಕೇಜ್ ನೀಡುವ ಕುರಿತು ಚರ್ಚಿಸಬೇಕು ಎಂದು ಒತ್ತಾಯಿಸಿದ್ದಾರೆ.
Good News : ರಾಜ್ಯ ಸರ್ಕಾರದಿಂದ ವಸತಿ ರಹಿತ ಬಡ ಜನತೆಗೆ ಗುಡ್ ನ್ಯೂಸ್ : ಮಾರ್ಚ್ ವೇಳೆಗೆ 5 ಲಕ್ಷ ಮನೆ ನಿರ್ಮಾಣ
ರಾಜ್ಯ ಸರ್ಕಾರವು ಯೋಜನೆಯೊಂದನ್ನು ರೂಪಿಸಿ ರೈತಾಪಿ ಯುವಕರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಷರತ್ತು ಬದ್ಧವಾಗಿ 10 ಲಕ್ಷ ರೂ. ಪ್ರೋತ್ಸಾಹಧನ ಸೇರಿದ ವಿಶೇಷ ಪ್ಯಾಕೇಜ್ ನ್ನು ಸರ್ಕಾರ ಘೋಷಿಸಬೇಕು ಎಂದು ಆಗ್ರಹಿಸಿದರು.