ನವದೆಹಲಿ: ಧಾರ್ಮಿಕ ಸ್ವಾತಂತ್ರ್ಯವು ಬಲಪ್ರಯೋಗ, ವಂಚನೆ, ಆಮಿಷ ಮತ್ತು ಮೋಸದ ಮೂಲಕ ನಾಗರಿಕರನ್ನು ಮತಾಂತರ ಮಾಡುವ ಮೂಲಭೂತ ಹಕ್ಕನ್ನು ಹೊಂದಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಇತರ ಜನರನ್ನು ನಿರ್ದಿಷ್ಟ ಧರ್ಮಕ್ಕೆ ಪರಿವರ್ತಿಸುವ ಮೂಲಭೂತ ಹಕ್ಕನ್ನು ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ವಾದಿಸಿದೆ. ಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಸಿ.ಟಿ.ರವಿಕುಮಾರ್ ಅವರ ಪೀಠವು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಕಳೆದ ಎರಡು ದಶಕಗಳಲ್ಲಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವ್ಯಕ್ತಿಗಳ ಸಾಮೂಹಿಕ ಧಾರ್ಮಿಕ ಮತಾಂತರದ ತೀವ್ರ ಏರಿಕೆ ಎಂದು ಆರೋಪಿಸಿ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಬಹಳ ಗಂಭೀರ ವಿಷಯವನ್ನು ಎತ್ತುತ್ತದೆ ಮತ್ತು ಎಲ್ಲಾ ರಾಜ್ಯಗಳಿಂದ ದತ್ತಾಂಶಗಳನ್ನು ಸಂಗ್ರಹಿಸಿದ ನಂತರ ಕೇಂದ್ರವು ಸಮಗ್ರ ಅಫಿಡವಿಟ್ ಸಲ್ಲಿಸುವ ಅಗತ್ಯವಿದೆ ಎಂದು ಹೇಳಿದೆ.
ಮೋಸದ ಅಥವಾ ಪ್ರೇರಿತ ಮತಾಂತರವು ವ್ಯಕ್ತಿಯ ಆತ್ಮಸಾಕ್ಷಿಯ ಸ್ವಾತಂತ್ರ್ಯದ ಹಕ್ಕನ್ನು ಪ್ರತಿಬಂಧಿಸುತ್ತದೆ. ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಅಡ್ಡಿಪಡಿಸುತ್ತದೆ. ಅದನ್ನು ನಿಯಂತ್ರಿಸಲು ಅಥವಾ ನಿರ್ಬಂಧಿಸಲು ರಾಜ್ಯಗಳು ಪೂರ್ಣ ಅಧಿಕಾರವನ್ನು ಹೊಂದಿವೆ. ನಿಸ್ಸಂದೇಹವಾಗಿ ಧರ್ಮದ ಸ್ವಾತಂತ್ರ್ಯದ ಹಕ್ಕು. ದೇಶದ ಎಲ್ಲಾ ನಾಗರಿಕರ ಆತ್ಮಸಾಕ್ಷಿಯ ಹಕ್ಕು ಎಲ್ಲರೂ ಪಾಲಿಸಬೇಕಾದ ಹಕ್ಕಾಗಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ.