ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವೆಂಬರ್ 29 ರ ಇಂದು ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ತೀವ್ರ ಕೂತುಹಲಕ್ಕೆ ಕಾರಣವಾಗಿದ್ದು, ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ಪಡೆದುಕೊಂಡು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
BIGG NEWS : ಇನ್ಮುಂದೆ ʼನಮ್ಮ ಕ್ಲಿನಿಕ್ʼ ನಲ್ಲಿ 30 ವರ್ಷ ಮೀರಿದ ಎಲ್ಲರಿಗೂ `ಶುಗರ್ ಟೆಸ್ಟ್’
ಇಂದು ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಲಿದ್ದು, ವರಿಷ್ಠರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದ್ದು, ಜೊತೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಸಚಿವಾಕಾಂಕ್ಷಿಗಳ ಒತ್ತಡ, ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ಇಂದು ರಂದು ದೆಹಲಿಗೆ ತೆರಳಲಿದ್ದಾರೆ. ಇಂದು ಸಿಎಂ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳಸಲಿದ್ದು, ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾಚರಣೆ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿ ಭೇಟಿ ನಿಗದಿಯಾದ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಮತ್ತೆ ಲಾಭಿ ಮುಂದುವರೆಸಿದ್ದಾರೆ. ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಸಿ.ಪಿ. ಯೋಗೇಶ್ವರ್, ಕೆ.ಎಸ್.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ.