ನವದೆಹಲಿ : ಸಿಎಂ ಬಸವರಾಜ ಬೊಮ್ಮಾಯಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಮತ್ತು ಕೆಲವು ಪ್ರಮುಖ ಸಚಿವರನ್ನು ಭೇಟಿ ಮಾಡಲು ಸಿಎಂ ಭೇಟಿ ಮಾಡಲಿದ್ದು, ಇದರ ಜೊತೆಗೆ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೂ ಅವರು ಪ್ರಸ್ತಾಪಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಮತ್ತೆ ಸಂಪುಟ ಸೇರಲು ಕೆ.ಎಸ್ ಈಶ್ವರಪ್ಪ, ರಮೇಶ್ ಜಾರಕಿಹೋಳಿ, ಬಸನಗೌಡ ಪಾಟೀಲ್ ಯತ್ನಾಳ್, ಸಿ.ಪಿ ಯೋಗಿಶ್ವರ್ ಸೇರಿ ಹಲವು ನಾಯಕರು ಯತ್ನಿಸಿದ್ದು, ಯಾರಿಗೆ ಸಚಿವ ಸ್ಥಾನ ಸಿಗುತ್ತದೆ. ಸಚಿವ ಸಂಪುಟ ವಿಸ್ತರಣೆ ಯಾವಾಗ ನಡೆಯಲಿದೆ ಎಂಬುದನ್ನು ಕಾದು ನೋಡಬೇಕು.
BIGG NEWS: ಮಹಾರಾಷ್ಟ್ರ ಸಚಿವರನ್ನು ಬೆಳಗಾವಿಗೆ ಪ್ರವೇಶಿಸದಂತೆ ನಿಷೇಧಿಸಬೇಕು; ಕರವೇ ಆಗ್ರಹ