ಬೆಂಗಳೂರು: ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯ ತೀರ್ಪನ್ನು ಇಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಪ್ರಕಟಿಸಲಿದೆ.
ಕರ್ನಾಟಕದ ಪಿಎಫ್ಐ ಅಧ್ಯಕ್ಷ ನಾಸೀರ್ ಅಲಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ , ತೀರ್ಪನ್ನು ನವೆಂಬರ್ 30ಕ್ಕೆ ಕಾಯ್ದಿರಿಸಿತ್ತು.PFI ಬ್ಯಾನ್ ಪ್ರಶ್ನಿಸಿದ್ದ ರಿಟ್ ಅರ್ಜಿ ಸಂಬಂಧ ತೀರ್ಪು ಇಂದು ಹೊರಬೀಳಲಿದೆ. ಇನ್ನೂ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಜಯಕುಮಾರ್ ಎಸ್.ಪಾಟೀಲ್ ಪಿಎಫ್ಐ (PFI) ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ. ಆದರೆ ಪಿಎಫ್ಐ ಕಾನೂನು ಬಾಹಿರ ಸಂಘಟನೆ ಎನ್ನುವುದಕ್ಕೆ ಕೇಂದ್ರ ಸರ್ಕಾರ ಸೂಕ್ತ ಕಾರಣ ನೀಡಿಲ್ಲ. ತಕ್ಷಣದ ಬ್ಯಾನ್ಗೆ ಪ್ರತ್ಯೇಕ ಕಾರಣ ನೀಡಬೇಕಿತ್ತು. ವಾದಮಂಡನೆಗೆ ಕಾಲಾವಕಾಶ ನೀಡದೇ ಬ್ಯಾನ್ ಮಾಡಲಾಗಿದೆ. ಯುಎಪಿಎ ಕಾಯ್ದೆಗೆ ವಿರುದ್ಧವಾಗಿ ಆದೇಶ ಹೊರಡಿಸಲಾಗಿದೆ ಎಂದು ವಾದ ಮಂಡಿಸಿದ್ದರು.