ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ( Kuvempu University ) 2022-23ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆಯ ಅವಧಿಯನ್ನು ಡಿ.07ರವರೆಗೆ ವಿಸ್ತರಿಸಲಾಗಿದೆ.
ಈ ಕುರಿತು ಪ್ರಕಟಣೆ ನೀಡಿರುವ ಶೈಕ್ಷಣಿಕ ವಿಭಾಗ, ಈ ಹಿಂದೆ ವಿಶ್ವವಿದ್ಯಾಲಯದ ವಿವಿಧ ಸ್ನಾತಕೋತ್ತರ ಪದವಿಗಳ ಪ್ರವೇಶಾತಿಗೆ ಯು.ಯು.ಸಿ.ಎಂ.ಎಸ್ ಪೋರ್ಟಲ್ ಮೂಲಕ ಆನ್ ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಒದಗಿಸಲಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 30 ಅಂತಿಮ ದಿನಾಂಕವಾಗಿತ್ತು.
ಆದರೆ ಪೋರ್ಟಲ್ ನಲ್ಲಿ ತಾಂತ್ರಿಕ ದೋಷಗಳು ಕಂಡುಬಂದಿರುವ ಕಾರಣ,ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಫ್ ಲೈನ್ ನಲ್ಲಿ ಕೂಡ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಡಿ. 07ರವರೆಗೆ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಈಗ ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಫ್ ಲೈನ್ ಅರ್ಜಿಗಳನ್ನು ವಿಶ್ವವಿದ್ಯಾಲಯದ ವೆಬ್ ಸೈಟ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
BIGG NEWS : ‘ಅರಣ್ಯ ಭೂಮಿ’ ಸಾಗುವಳಿ ಮಾಡುತ್ತಿರುವ ರೈತರಿಗೆ ‘ಸಿಎಂ ಬೊಮ್ಮಾಯಿ’ ಗುಡ್ ನ್ಯೂಸ್
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ