ಹೈದರಾಬಾದ್: ಹೈದರಾಬಾದ್ನ ಹೊರವಲಯದಲ್ಲಿರುವ ಹಯತ್ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ನೇ ತರಗತಿಯ ಬಾಲಕಿಯ ಮೇಲೆ ಆಕೆಯ ಐವರು ಸಹಪಾಠಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಮತ್ತು ಲೈಂಗಿಕ ದೌರ್ಜನ್ಯದ ವಿಡಿಯೋ ಕ್ಲಿಪ್ ಬಳಸಿ ಬ್ಲ್ಯಾಕ್ಮೇಲ್ ಮಾಡಿದ್ದಾರೆ.
ಲೈಂಗಿಕ ದೌರ್ಜನ್ಯದ ಬಗ್ಗೆ ಯಾರಿಗಾದರೂ ಬಾಯ್ಬಿಟ್ಟರೆ ವಿಡಿಯೋವನ್ನು ಸಾಮಾಜಿಕ ಜಾಲತಾಣ(WhatsApp)ಗಳಲ್ಲಿ ಹಾಕುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದಾರೆ. ಮತ್ತೆ ಹತ್ತು ದಿನಗಳ ನಂತರ ಮತ್ತೆ ಬಾಲಕಿಯನ್ನು ಬ್ಲಾಕ್ ಮೇಲ್ ಮಾಡುವ ಮೂಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಆಗಸ್ಟ್ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ಆರೋಪಿಗಳು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಪೋಷಕರಿಗೆ ವಿಷಯ ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪೊಲೀಸರು ಐವರು ವಿದ್ಯಾರ್ಥಿಗಳೆಲ್ಲರೂ ಅಪ್ರಾಪ್ತರಾಗಿದ್ದಾರೆ. ಅವರ ವಿರುದ್ಧ ಕೇಸ್ ದಾಖಲಾಗಿದ್ದು, ಅವರನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದಿದ್ದಾರೆ.
ಕಟ್ಟಡ ಕಾರ್ಮಿಕರೇ ಗಮನಿಸಿ : ಡಿ.1ರಿಂದ ‘ಬೆಂಗಳೂರು ಒನ್ ಕೇಂದ್ರ’ಗಳಲ್ಲಿ ಮಾತ್ರ ‘BMTC ಪಾಸ್’ ವಿತರಣೆ
‘EPFO’ನಲ್ಲಿ ಮಹತ್ವದ ಬದಲಾವಣೆ ; ಪಿಎಫ್, ಪಿಂಚಣಿ, ವಿಮೆ ಹಣ ‘ಒಂದೇ ಖಾತೆ’ಗೆ ಜಮೆ ಮಾಡಲು ‘ಸರ್ಕಾರ’ ಸಜ್ಜು