ಬೆಂಗಳೂರು : ಮತದಾರರ ಮಾಹಿತಿ ಸೋರಿಕೆ ಪ್ರಕರಣದ ಹಿನ್ನೆಲೆ ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಶೇ 100 ಪರಿಶೀಲನೆ ಮಾಡಲು ಮೂವರು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದು, ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಡಾ ಆರ್ ವಿಶಾಲ್ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಡಾ ಆರ್ ಅಜಯ್ ನಾಗಭೂಷಣ್ ಅವರನ್ನು ವಿಶೇಷ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
2022 ರ ಜನವರಿ1 ರಿಂದ ಇಲ್ಲಿವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿರುವ ಮತ್ತು ತೆಗೆದು ಹಾಕಿರುವ ಮಾಹಿತಿಯನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡುವಂತೆ ಸೂಚಿಸಲಾಗಿದೆ. ಮತದಾರರ ಮಾಹಿತಿ ಸೋರಿಕೆ ಪ್ರಕರಣ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಟೀಕಾ ಪ್ರಹಾರ ನಡೆಸಿದೆ.
BIGG NEWS: ಚಳಿಯೇ ನಡುವೆಯೇ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ