ಮಂಡ್ಯ: ಬಿಜೆಪಿಯವರಿಗೆ ಸಮಾಜದಲ್ಲಿ ಗಲಭೆ ಎಬ್ಬಿಸಲು ರೌಡಿಗಳು ಬೇಕು. ಅದೇ ಕಾರಣಕ್ಕೆ ರೌಡಿ ಶೀಟರ್ಗಳನ್ನು ತಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದರು.
BIGG NEWS: ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್; ಬಂಗಾರ, ಬೆಳ್ಳಿ ದರದಲ್ಲಿ ಭಾರಿ ಇಳಿಕೆ
ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯ ಇಬ್ಬರು ಎಂಪಿಗಳು ಸೈಲೆಂಟ್ ಸುನೀಲ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವನು ಸರ್ಚ್ ವಾರೆಂಟ್ನಲ್ಲಿದ್ದಾನೆ. ಇಂಥವರ ಜತೆ ಓಡಾಡಿ ಸಮರ್ಥನೆ ಮಾಡಿಕೊಳ್ಳುತ್ತಾರೆ. ಬಿಜೆಪಿಯವರಿಗದು ಅಂಟುರೋಗ. ಅದರಲ್ಲೂ ಬಸವರಾಜ ಬೊಮ್ಮಾಯಿಗೆ ಜಾಸ್ತಿಯಾಗಿದೆ. ಏನೇ ಹೇಳಿದದೂ ಹಿಂದಿನ ಸರ್ಕಾರದಲ್ಲಿ ಆಗಿಲ್ವಾ ಅಂತಾರೆ. ನಿಮ್ಮ ತಪ್ಪುಗಳನ್ನು ಹೇಳಿ. ಜನ ನಿಮಗೆ ಅಧಿಕಾರ ಕೊಟ್ಟಿಲ್ಲ. ನೀವು ಅನೈತಿಕವಾಗಿ ಬಂದಿದ್ದೀರಾ ಎಂದು ಕಿಡಿಕಾರಿದರು.