ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್(Toyota Kirloskar Motor) ಪ್ರೈವೇಟ್ ಲಿಮಿಟೆಡ್ನ ಉಪಾಧ್ಯಕ್ಷ ವಿಕ್ರಮ್ ಎಸ್ ಕಿರ್ಲೋಸ್ಕರ್(Vikram Kirloskar) ಅವರು ಮಂಗಳವಾರ ನಿಧನರಾದರು ಎಂದು ಮೂಲಗಳು ತಿಳಿಸಿವೆ.
ಆರಂಭಿಕ ವರದಿಗಳ ಪ್ರಕಾರ, 64 ವರ್ಷದ ವಿಕ್ರಮ್ ಕಿರ್ಲೋಸ್ಕರ್ ತೀವ್ರ ಹೃದಯಾಘಾತದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಟೊಯೊಟಾ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ಗಳಲ್ಲಿ ಈ ಬಗ್ಗೆ ಹೇಳಿಕೆ ನೀಡಲಾಗಿದೆ. ಹೇಳಿಕೆಯಲ್ಲಿ, “ನವೆಂಬರ್ 29, 2022 ರಂದು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ನ ಉಪಾಧ್ಯಕ್ಷರಾದ ವಿಕ್ರಮ್ ಎಸ್.ಕಿರ್ಲೋಸ್ಕರ್ ಅವರ ಅಕಾಲಿಕ ನಿಧನವನ್ನು ತಿಳಿಸಲು ನಾವು ತುಂಬಾ ದುಃಖಿತರಾಗಿದ್ದೇವೆ. ಈ ದುಃಖದ ಸಮಯದಲ್ಲಿ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವು ಎಲ್ಲರಿಗೂ ವಿನಂತಿಸುತ್ತೇವೆ. ನವೆಂಬರ್ 30, ಬುಧವಾರ(ಇಂದು) ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೆಬ್ಬಾಳ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆʼ ಎಂದು ತಿಳಿಸಲಾಗಿದೆ.
ವಿಕ್ರಮ್ ಕಿರ್ಲೋಸ್ಕರ್ ಅವರು ಪತ್ನಿ ಗೀತಾಂಜಲಿ ಕಿರ್ಲೋಸ್ಕರ್ ಮತ್ತು ಮಗಳು ಮಾನಸಿ ಕಿರ್ಲೋಸ್ಕರ್ ಅವರನ್ನು ಅಗಲಿದ್ದಾರೆ. ವಿಕ್ರಮ್ ಕಿರ್ಲೋಸ್ಕರ್ ಅವರು ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಯಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಪದವೀಧರರಾಗಿದ್ದರು. ಅವರು ವರ್ಷಗಳಲ್ಲಿ CII, SIAM ಮತ್ತು ARAI ನಲ್ಲಿ ಹಲವಾರು ಪ್ರಮುಖ ಸ್ಥಾನಗಳನ್ನು ಹೊಂದಿದ್ದರು. ವಿಕ್ರಮ್ ಕಿರ್ಲೋಸ್ಕರ್ ಕಿರ್ಲೋಸ್ಕರ್ ಗ್ರೂಪ್ನ ನಾಲ್ಕನೇ ತಲೆಮಾರಿನ ಮುಖ್ಯಸ್ಥರಾಗಿದ್ದರು. ಅವರು ಕಿರ್ಲೋಸ್ಕರ್ ಸಿಸ್ಟಮ್ಸ್ ಲಿಮಿಟೆಡ್ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು ಮತ್ತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ನ ಉಪಾಧ್ಯಕ್ಷರೂ ಆಗಿದ್ದರು.
ಯುಪಿಯಲ್ಲಿ ಘೋರ ದುರಂತ: ಫರ್ನಿಚರ್ ಅಂಗಡಿಗೆ ಬೆಂಕಿ ತಗುಲಿ ಒಂದೇ ಕುಟುಂಬದ 6 ಮಂದಿ ಸಜೀವ ದಹನ