ಇಸ್ಲಾಮಾಬಾದ್: ಪಾಕಿಸ್ತಾನದ ನೈಋತ್ಯ ಭಾಗದ ನಗರವಾದ ಕ್ವೆಟ್ಟಾದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಪೊಲೀಸ್ ವಾಹನವನ್ನು ಗುರಿಯಾಗಿಸಿಕೊಂಡು ನಡೆದ ಈ ಬಾಂಬ್ ಸ್ಫೋಟದಲ್ಲಿ ಓರ್ವ ಪೊಲೀಸ್ ಅಧಿಕಾರಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಪಾಕಿಸ್ತಾನಿ ತಾಲಿಬಾನ್ ಎಂದೂ ಕರೆಯಲ್ಪಡುವ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಸಶಸ್ತ್ರ ಗುಂಪು ಈ ಆತ್ಮಾಹುತಿ ದಾಳಿಯ ಹೊಣೆ ಹೊತ್ತುಕೊಂಡಿದೆ. ಜೂನ್ನಲ್ಲಿ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದ್ದ ಕದನ ವಿರಾಮವನ್ನು ಕೊನೆಗೊಳಿಸುವುದಾಗಿ ಘೋಷಿಸಿದ 2 ದಿನಗಳ ನಂತರ ಈ ದಾಳಿ ನಡೆದಿದೆ.
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿಯಲ್ಲಿ ಪೋಲಿಯೊ ಲಸಿಕೆ ಅಭಿಯಾನದ ಕಾರ್ಯಕರ್ತರನ್ನು ರಕ್ಷಿಸಲು ನಿಯೋಜಿಸಲಾದ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎಂದು ಕ್ವೆಟ್ಟಾದ ಪೊಲೀಸ್ ಡಿಐಜಿ ಗುಲಾಮ್ ಅಜ್ಫರ್ ಮಹೇಸರ್ ತಿಳಿಸಿದ್ದಾರೆ. ಬುಲೇಲಿ ಜಿಲ್ಲೆಯಲ್ಲಿ ನಡೆದ ಘಟನೆಯಲ್ಲಿ 28ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಲ್ಲಿ 20 ಮಂದಿ ಪೊಲೀಸರು ಸೇರಿದ್ದಾರೆ.
QUETTA, Pakistan – A suicide bomb blast in Pakistan's southwestern city of Quetta targeted a police patrol, killing three people and wounding 28.#Pakistan #Quetta #Balochistan pic.twitter.com/TBLcyncTqJ
— Defence Intel (@Defencelntel) November 30, 2022
ಬಲೂಚಿಸ್ತಾನ ಮುಖ್ಯಮಂತ್ರಿ ಅಬ್ದುಲ್ ಖುದ್ದೂಸ್ ಬಿಜೆಂಜೊ ಈ ದಾಳಿಯನ್ನು ಖಂಡಿಸಿದ್ದು, ಇಂತಹ ಹೇಡಿತನದ ಕೃತ್ಯಗಳನ್ನು ಎದುರಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮೃತಪಟ್ಟವರಲ್ಲಿ ಓರ್ವ ಪೊಲೀಸ್, ಓರ್ವ ಮಹಿಳೆ ಹಾಗೂ ಒಂದು ಮಗು ಸೇರಿದೆ.
ಟಿಟಿಪಿ ಸಂಘಟನೆ 2007ರಲ್ಲಿ ಅಸ್ತಿತ್ವಕ್ಕೆ ಬಂದ ಬಳಿಕ ಪಾಕಿಸ್ತಾನದ ನಾಗರಿಕರು, ಸರ್ಕಾರಿ ಅಧಿಕಾರಿಗಳು, ಪೊಲೀಸ್ ಮತ್ತು ಯೋಧರ ಮೇಲೆ ಹಲವು ದಾಳಿಗಳನ್ನು ನಡೆಸಿದೆ. ಪಾಕಿಸ್ತಾನದ ವಾಯುವ್ಯ ಭಾಗದ ಅಧಿಕ ಪ್ರಾಂತ್ಯಗಳಲ್ಲಿ 2007 ರಿಂದ 2013 ರವರೆಗೆ ತಾಲಿಬಾನ್ ಅಧಿಕಾರ ನಡೆಸುತ್ತಿದ್ದ ಅವಧಿಯಲ್ಲಿ ಟಿಟಿಪಿ ನಡೆಸಿದ ದಾಳಿಗಳಿಗೆ ಸಾವಿರಾರು ಪಾಕಿಸ್ತಾನಿಗಳು ಬಲಿಯಾಗಿದ್ದಾರೆ. ಪಾಕಿಸ್ತಾನ ಸರ್ಕಾರದೊಂದಿಗೆ ಮಾಡಿಕೊಂಡಿದ್ದ ಶಾಂತಿ ಒಪ್ಪಂದವನ್ನು ಟಿಟಿಪಿ ಉಲ್ಲಂಘಿಸಿ ಕೆಲ ಪ್ರಾಂತ್ಯಗಳನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ.
ತನ್ನ ಹೊಸ ಗೆಳತಿಗೆ ಶ್ರದ್ಧಾಳ ಉಂಗುರ ತೊಡಿಸಿದ್ದ ಅಫ್ತಾಬ್… ಸುದ್ದಿ ತಿಳಿದು ಆಘಾತಕ್ಕೊಳಗಾದ ಮನೋವೈದ್ಯೆ!