ಬೆಂಗಳೂರು: ಬಿಜೆಪಿ ಹಾಗೂ ರೌಡಿಗಳ ನಡುವಿನ ಬಾಂಧವ್ಯಕ್ಕೆ ಬಿಬಿಎಂಪಿ ಕಸ ವಿಲೇವಾರಿಯ ಟೆಂಡರ್ ಸಾಕ್ಷಿಯಾಗುತ್ತಿದೆ. ಬೇನಾಮಿ ಹೆಸರಲ್ಲಿ ಸೈಲೆಂಟ್ ಸುನೀಲನಿಗೆ ಕಸದ ಟೆಂಡರ್ ಕೊಡಿಸಿದ ಸಚಿವ ಯಾರು? ಆ ಸಚಿವರಿಗೂ ಸುನೀಲನಿಗೂ ಯಾವ ಜನ್ಮದ ಮೈತ್ರಿ? ಅರ್ಹತೆ ಇಲ್ಲದಿದ್ದರೂ ನಿಯಮ ಮೀರಿ ಟೆಂಡರ್ ಕೊಟ್ಟಿದ್ದು ಹೇಗೆ? ಏಕೆ? BJP ಉತ್ತರಿಸುವುದೇ? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ.
ಬಿಜೆಪಿ ಹಾಗೂ ರೌಡಿಗಳ ನಡುವಿನ ಬಾಂಧವ್ಯಕ್ಕೆ ಬಿಬಿಎಂಪಿ ಕಸ ವಿಲೇವಾರಿಯ ಟೆಂಡರ್ ಸಾಕ್ಷಿಯಾಗುತ್ತಿದೆ.
ಬೇನಾಮಿ ಹೆಸರಲ್ಲಿ ಸೈಲೆಂಟ್ ಸುನೀಲನಿಗೆ ಕಸದ ಟೆಂಡರ್ ಕೊಡಿಸಿದ ಸಚಿವ ಯಾರು?
ಆ ಸಚಿವರಿಗೂ ಸುನೀಲನಿಗೂ ಯಾವ ಜನ್ಮದ ಮೈತ್ರಿ?
ಅರ್ಹತೆ ಇಲ್ಲದಿದ್ದರೂ ನಿಯಮ ಮೀರಿ ಟೆಂಡರ್ ಕೊಟ್ಟಿದ್ದು ಹೇಗೆ? ಏಕೆ?@BJP4Karnataka ಉತ್ತರಿಸುವುದೇ?
— Karnataka Congress (@INCKarnataka) November 30, 2022
ಈ ಕುರಿತಂತೆ ಸರಣಿ ಟ್ವಿಟ್ ಮಾಡಿದ್ದು, ಡ್ಯಾಮೇಜ್ ಕಂಟ್ರೋಲಿಗಾಗಿ ಸೈಲೆಂಟ್ ಸುನಿಲನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ನಳೀನ್ ಕುಮಾರ್ ಕಟೀಲ್, ಫೈಟರ್ ರವಿ ಪಕ್ಷ ಸೇರಿದ್ದರ ಬಗ್ಗೆ ಸೈಲೆಂಟ್ ಆಗಿರುವುದೇಕೆ? ಫೈಟರ್ ರವಿ ರೌಡಿ ಶೀಟರ್ ಅಲ್ಲವೇ ಬಿಜೆಪಿ ? ಇಂತಹ ಸದಾರಮೆ ನಾಟಕ ಮಾಡುವುದಕ್ಕಿಂತ ರೌಡಿ ಮೋರ್ಚಾವನ್ನು ಘೋಷಣೆ ಮಾಡಿಬಿಡಲಿ ಎಂದಿದೆ.
ಡ್ಯಾಮೇಜ್ ಕಂಟ್ರೋಲಿಗಾಗಿ ಸೈಲೆಂಟ್ ಸುನಿಲನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ @nalinkateel ಫೈಟರ್ ರವಿ ಪಕ್ಷ ಸೇರಿದ್ದರ ಬಗ್ಗೆ ಸೈಲೆಂಟ್ ಆಗಿರುವುದೇಕೆ?
ಫೈಟರ್ ರವಿ ರೌಡಿ ಶೀಟರ್ ಅಲ್ಲವೇ @BJP4Karnataka?
ಇಂತಹ ಸದಾರಮೆ ನಾಟಕ ಮಾಡುವುದಕ್ಕಿಂತ ರೌಡಿ ಮೋರ್ಚಾವನ್ನು ಘೋಷಣೆ ಮಾಡಿಬಿಡಲಿ!
— Karnataka Congress (@INCKarnataka) November 30, 2022
ಒಂದೆಡೆ ಡಾ.ಸಿಎನ್ ಅಶ್ವತ್ಥನಾರಾಯಣ ಹಾಗೂ ಸಿಎಂ ರೌಡಿಗಳನ್ನು ಸಮರ್ಥಿಸಿ ಮಾತಾಡುತ್ತಾರೆ, ಮತ್ತೊಂದೆಡೆ ಎಲ್ಲೋ ಅಡಗಿದ್ದ ನಳೀನ್ ಕುಮಾರ್ ಕಟೀಲ್ ಧಿಡೀರ್ ಎದ್ದುಬಂದು ಸೈಲೆಂಟ್ ಸುನಿಲನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎನ್ನುತ್ತಾರೆ. ರೌಡಿ ಮೋರ್ಚಾ ಮಾಡುವ ವಿಚಾರದಲ್ಲೂ #BJPvsBJP ಕಾದಾಟ ನಡೆಯುತ್ತಿದೆಯೇ ಬಿಜೆಪಿ? ಎಂದು ಕೇಳಿದೆ.
ಒಂದೆಡೆ @drashwathcn ಹಾಗೂ ಸಿಎಂ ರೌಡಿಗಳನ್ನು ಸಮರ್ಥಿಸಿ ಮಾತಾಡುತ್ತಾರೆ, ಮತ್ತೊಂದೆಡೆ ಎಲ್ಲೋ ಅಡಗಿದ್ದ @nalinkateel ಧಿಡೀರ್ ಎದ್ದುಬಂದು ಸೈಲೆಂಟ್ ಸುನಿಲನನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎನ್ನುತ್ತಾರೆ.
ರೌಡಿ ಮೋರ್ಚಾ ಮಾಡುವ ವಿಚಾರದಲ್ಲೂ #BJPvsBJP ಕಾದಾಟ ನಡೆಯುತ್ತಿದೆಯೇ @BJP4Karnataka?
— Karnataka Congress (@INCKarnataka) November 30, 2022