ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿನ ಕಾಮಗಾರಿಯ ಹಿನ್ನಲೆಯಲ್ಲಿ ಡಿಸೆಂಬರ್ 3, 2022ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cu ) ಉಂಟಾಗಲಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮೆಸ್ಕಾಂ ( MESCOM ), ಶಿವಮೊಗ್ಗ ತಾಲ್ಲೂಕು ಕುಂಸಿ ಗ್ರಾಮದ 100/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಪೂರೈಸುವ ಮಾರ್ಗದ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಕುಂಸಿ ವ್ಯಾಪ್ತಿಗೆ ಬರುವ ಕನಕ ನಗರ, ಪೊಲೀಸ್ ವಸತಿ ಗೃಹ, ಇಂದಿರಾ ಕಾಲೋನಿ, ಚೋರಡಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲ ಹಳ್ಳಿಗಳು, ತುಪ್ಪೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲ ಹಳ್ಳಿಗಳು ಮತ್ತು ಶಿಕಾರಿಪುರ ಮಾಸ್ತಿಬೈಲು ಹಳ್ಳಿ, ದೊಡ್ಡಿಮಟ್ಟಿ ಗ್ರಾಮಗಳ ವ್ಯಾಪ್ತಿಯಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕಾಗಿ ತಿಳಿಸಿದೆ.
ರಾಜ್ಯ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ
ಕಾಲೇಜು ಪ್ರಾರಂಭಿಸಲು ಅರ್ಜಿ ಆಹ್ವಾನ
2023-24ನೇ ಶೈಕ್ಷಣಿಕ ಸಾಲಿನಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನರಹಿತ ಪದವಿಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಚಿಸುವ ಅರ್ಹ ಶಿಕ್ಷಣ ಸಂಸ್ಥೆ/ಟ್ರಸ್ಟ್ ಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆ ವೆಬ್ಸೈಟ್ www.pue.Karnataka.gov.in ಇಲ್ಲಿ ನಿಗದಿತ ಲಿಂಕ್ https://dpue-exam.karnataka.gov.in/newcollege2023 ಇಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ನಿಗದಿತ ನಮೂನೆ(form-1) ರಲ್ಲಿ ದಿ: 06/12/2023ರೊಳಗೆ ಸಲ್ಲಿಸಬಹುದೆಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.