ಬೆಂಗಳೂರು : ಬಿಜೆಪಿಗೆ ಸಾಲು, ಸಾಲು ರೌಡಿ ಶೀಟರ್ ಗಳ ಸೇರ್ಪಡೆಯಾಗುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ಅವರಿಗೆ ಕುಸ್ತಿ ಮಾಡಲು ಜನ ಬೇಕಾಗಿದೆ. ಹೀಗಾಗಿ ಸೇರಿಸಿಕೊಳ್ಳುತ್ತಿದ್ದಾರೆ, ಸೇರಿಸಿಕೊಳ್ಳಲಿ ಬಿಡಿ ಎಂದು ವ್ಯಂಗ್ಯವಾಡಿದರು.
ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ ಬಿಜೆಪಿ ಅವರಿಗೆ ಕುಸ್ತಿ ಮಾಡಲು ಜನ ಬೇಕಾಗಿದೆ. ಹೀಗಾಗಿ ಸೇರಿಸಿಕೊಳ್ಳುತ್ತಿದ್ದಾರೆ, ಸೇರಿಸಿಕೊಳ್ಳಲಿ ಬಿಡಿ ಎಂದು ಕಿಡಿಕಾರಿದರು.
ಬೆಳಗಾವಿ ಗಡಿ ವಿವಾದದ ಕುರಿತು ಡಿಕೆಶಿ ಪ್ರತಿಕ್ರಿಯೆ ನೀಡಿದ್ದು, ಗಡಿ ಹೆಸರಲ್ಲಿ ಶಾಂತಿ ಕದಡುವುದು, ಇದರಲ್ಲಿ ಭಾಗಿಯಾಗುವುದು ಸರಿಯಲ್ಲ. ನಮ್ಮ ಮುಖ್ಯಮಂತ್ರಿಗಳು ತಮ್ಮ ಸರ್ಕಾರದ ಮೇಲಿರುವ ಕಳಂಕ ಮರೆಮಾಚಿಕೊಳ್ಳಲು ಇದನ್ನು ದೊಡ್ಡದಾಗಿ ಮಾಡುತ್ತಿದ್ದಾರೆ. ಎಂದು ಆರೋಪಿಸಿದರು.
ಮೊದಲೆಲ್ಲ ರೌಡಿ ಶೀಟರ್ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು, ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಮೊದಲೆಲ್ಲ ರೌಡಿ ಶೀಟರ್ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು, ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ. ರೌಡಿಗಳೊಂದಿಗೆ ಬಿಜೆಪಿಗರ ಬಾಂಧವ್ಯ ಹೊರಬರುತ್ತಿರುವಾಗ ಮತ್ತೊಬ್ಬ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸಚಿವ ಸೊಮ್ಮಣ್ಣನವರ ಮನೆಗೆ ಭೇಟಿ ನೀಡಿದ್ದು ಬಿಜೆಪಿಯ ರೌಡಿ ಮೋರ್ಚಾಗೆ ಶಕ್ತಿ ನೀಡವುದಕ್ಕಾ? ಎಂದು ಪ್ರಶ್ನಿಸಿದೆ.
ರೌಡಿಗಳಿಗೂ ಬಿಜೆಪಿ ನಾಯಕರಿಗೂ ಏನು ಸಂಬಂಧ? ಏನು ವ್ಯವಹಾರ? ಯಾವ ನಂಟು? ಸೈಲೆಂಟ್ ಸುನೀಲ, ಫೈಟರ್ ರವಿ, ಬೆತ್ತನಗೆರೆ ಶಂಕರ ಬಿಜೆಪಿ ಜೊತೆಗೆ ಗುರುತಿಸಿಕೊಂಡ ನಂತರ ವಿಲ್ಸನ್ ಗಾರ್ಡನ್ ನಾಗ ಎಂಬ ರೌಡಿ ಶೀಟರ್ ನಿನ್ನೆ ರಾತ್ರಿ ಸಚಿವ ವಿ.ಸೋಮಣ್ಣ ಮನೆಗೆ ಬಂದಿದ್ದೇಕೆ? ಆತನೂ ಬಿಜೆಪಿ ರೌಡಿ ಮೋರ್ಚಾ ಸೇರುವ ಸಂಭವವಿದೆ ಎಂದು ಹೇಳಿದೆ.
BIGG NEWS : ‘ಕನ್ನಡ ಬಾವುಟ’ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ : ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ