ಬೆಂಗಳೂರು : ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಸರ್ಕಾರಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಮುಂದಾಗಿದ್ದಕ್ಕೆ ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಚಾರಕ್ಕೆ ಪ್ರಮೋದ್ ಮುತಾಲಿಕ್ ಗೆ ಬೆದರಿಕೆ ಬಂದಿದೆ ಎನ್ನಲಾಗಿದೆ.
ಅಪರಿಚಿತ ವ್ಯಕ್ತಿ ತನ್ನ ವಾಟ್ಸಪ್ ನಿಂದ ವಾಯ್ಸ್ ಮೆಸೇಜ್ ಕಳುಹಿಸಿದ್ದು, ಪ್ರಮೋದ್ ಮುತಾಲಿಕ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಜೀವ ಬೆದರಿಕೆ ಕೂಡ ಹಾಕಿದ್ದಾನೆ. ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯ ಮೇಲೆ ಧಾರವಾಡದ ಉಪನಗರ ಠಾಣೆಯಲ್ಲಿ ಮುತಾಲಿಕ್ ದೂರು ದಾಖಲಿಸಿದ್ದಾರೆ.
ಏನಿದು ಘಟನೆ
ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ 10 ಸರ್ಕಾರಿ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ ಮುಂದಾಗಿದ್ದಕ್ಕೆ ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಕುರಿತಾಗಿ, ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹುಬ್ಬಳ್ಳಿಯಲ್ಲಿ ಈ ಬಗ್ಗೆ ಮಾತನಾಡಿದ್ದು, ಸರ್ಕಾರದ ಈ ನಿರ್ಧಾರವನ್ನು ವಿರೋಧಿಸುವ ಜೊತೆಗೆ ಈ ತೀರ್ಮಾನ ಕೈಗೊಳ್ಳಲೂ ಸರ್ಕಾರ ಮುಂದಾದರೆ, ಹಿಂದು ಸಂಘಟನೆಗಳ ಸೇರಿದಂತೆ ತೀವ್ರ ಸ್ವರೂಪದ ಹೋರಾಟ ನಡೆಸುವುದಾಗಿ ಮುನ್ನೆಚ್ಚರಿಕೆ ನೀಡಿದ್ದಾರೆ. ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿರುವ ಮುತಾಲಿಕ್ ಅವರು, ಶ್ರೀರಾಮ ಸೇನೆ ಮಾತ್ರವಲ್ಲದೇ, ಯಾವುದೇ ಹಿಂದು ಪರ ಸಂಘಟನೆಗಳ ಮುಖಂಡರು ಇದಕ್ಕೆ ಸಮ್ಮತ ಸೂಚಿಸಲು ಸಾಧ್ಯವಿಲ್ಲ ಎಂದಿದ್ದರು.
ಒಂದು ವೇಳೆ ಸರ್ಕಾರ ಈ ಕುರಿತಾಗಿ ಚಿಂತನೆ ನಡೆಸಿದರೆ, ಮುಂದಿನ ದಿನಗಳಲ್ಲಿ ಶ್ರೀ ರಾಮಸೇನೆ ಮುಂದಾಳತ್ವದಲ್ಲಿ ಎಲ್ಲ ಹಿಂದು ಸಂಘಟನೆಗಳ ಸೇರಿದಂತೆ ಉಗ್ರ ಸ್ವರೂಪದ ಹೋರಾಟ ನಡೆಸಲಾವುದು ಎಂದು ಎಚ್ಚರಿಕೆ ನೀಡಿದ್ದರು.
ಬಿಜೆಪಿಯ 40% ಸರ್ಕಾರ ಬೆಂಗಳೂರಿನ ಭೂಗಳ್ಳರ ಜೊತೆಯು ಶಾಮೀಲು: ಮಾಜಿ ಎಂಎಲ್ಸಿ ರಮೇಶ್ ಬಾಬು ಗಂಭೀರ ಆರೋಪ
BREAKING NEWS : ಹುಬ್ಬಳ್ಳಿಯಲ್ಲಿ ಆ್ಯಪ್ ಮೂಲಕ ಮತದಾರರ ಸರ್ವೆ : ಮೂವರ ಬಂಧನ