ಯಾದಗಿರಿ : ಅನೈತಿಕ ಸಂಬಂಧಕ್ಕೆ ಬೇಸತ್ತ ಪತಿಯೋರ್ವ ಪತ್ನಿ ಹಾಗೂ ಆಕೆಯ ಪ್ರಿಯಕರನ್ನು ಕಲ್ಲುಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ಜಿಲ್ಲೆಯ ಕಾಚಾಪುರ ಗ್ರಾಮದಲ್ಲಿ ನಡೆದಿದೆ.
ಬಸಮ್ಮ ಹಾಗೂ ಆಕೆಯ ಪ್ರಿಯಕರ ನಾಡಗೌಡ ಎಂಬುವವರು ಕೊಲೆಯಾದ ದುರ್ದೈವಿಗಳು. ಇಬ್ಬರು ಹೊಲದಲ್ಲಿ ರೆಡ್ ಹ್ಯಾಂಡ್ ಆಗಿ ಬಸಮ್ಮನ ಪತಿ ಮಲ್ಲಣ್ಣ ಕೈಗೆ ಸಿಕ್ಕಿಹಾಕಿಕೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಮಲ್ಲಣ್ಣ ಬಸಮ್ಮ ಹಾಗೂ ನಾಡಗೌಡನನ್ನು ಕುಡುಗೋಲಿನಿಂದ ಕೊಚ್ಚಿ , ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಪ್ರಕರಣ ಸಂಬಂಧ ಪೊಲೀಸರು ಆರೋಪಿ ಮಲ್ಲಣ್ಣನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟಾರೆ ಗಂಡನ ಜೊತೆ ಸುಖವಾಗಿ ಸಂಸಾರ ಮಾಡಬೇಕಿದ್ದ ಮಹಿಳೆ ಪರಪುರುಷನ ಮೋಹಕ್ಕೆ ಬಿದ್ದು ತನ್ನ ಪ್ರಾಣ ಕಳೆದುಕೊಂಡಿದ್ದಾಳೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.