ಶಿವಮೊಗ್ಗ : ರಾಜ್ಯದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಿಕ್ಷಣದಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿ (NEP) ಯನ್ನು ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಾರೇಹಳ್ಳಿ ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಮೂರು ದಿನಗಳ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪ್ರಸಕ್ತ ವರ್ಷ ಉನ್ನತ ಶಿಕ್ಷಣದಲ್ಲಿ ಜಾರಿಗೆ ತರಲಾಗಿದ್ದು, ಮುಂದಿನ ಶೈಕ್ಷಣಿಕ ವರ್ಷ ಪ್ರಾಥಮಿಕ ಶಿಕ್ಷಣದಲ್ಲೂ ಎನ್ ಇಪಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.
ಕಲಿಕಾ ಪ್ರಕ್ರಿಯೆ ಇನ್ನಷ್ಟು ಸರಳೀಕರಣಗೊಳಿಸಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಿದೆ. ಅದನ್ನು ನಾವು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದ್ದೇವೆ. ಇದು ಜ್ಞಾನದ ಶತಮಾನ, ಇಲ್ಲಿ ಜ್ಞಾನವಂತರು ಮಾತ್ರ ಯಶಸ್ವಿಯಾಗಲು ಸಾಧ್ಯ. ಹೀಗಾಗಿ ವಿದ್ಯಾರ್ಥಿ ವಿಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಅಳವಡಿಸಲು ಮುಂದಾಗಿದೆ ಎಂದು ತಿಳಿಸಿದ್ದಾರೆ.
BIGG NEWS : ಸುಕನ್ಯಾ ಸಮೃದ್ಧಿ ಯೋಜನೆ : ಹೆಣ್ಣು ಮಕ್ಕಳ ಪೋಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ