ಬಾಗಲಕೋಟೆ : ಬೆಂಗಳೂರಿನಲ್ಲಿ ಮತದಾರರ ಗುರುತಿನ ಚೀಟಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದ ಬೆನ್ನಲ್ಲೇ ಬಾಗಲಕೋಟೆ ಜಿಲ್ಲೆಯಲ್ಲೂ ಸಾವಿರಾರು ಜನರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಗಂಭೀರ ಆರೋಪ ಮಾಡಿದ್ದಾರೆ.
SHOCKING NEWS: ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಕೈಯಲ್ಲಿ ಟಾಯ್ಲೆಟ್ ಕ್ಲೀನ್ ಮಾಡಿಸಿದ ಎಚ್ಎಂ, ಪ್ರಕರಣ ದಾಖಲು
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ 10 ತಿಂಗಳಿನಲ್ಲಿ 64,954 ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ವಾಮಮಾರ್ಗದ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವ ಕೆಲವರು ಇಂಥ‚ ಕೀಳುಮಟ್ಟದ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
BIGG NEWS : ಆರೋಗ್ಯ, ಶಿಕ್ಷಣ ಸೇರಿ ಪ್ರಮುಖ ಇಲಾಖೆಗಳ ವರ್ಗಾವಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಬ್ರೇಕ್!
ಬಾಗಲಕೋಟೆ ಜಿಲ್ಲೆಯಲ್ಲಿ 10 ತಿಂಗಳ ಅವಧಿಯಲ್ಲಿ ಒಟ್ಟು 64,954 ಮತದಾರ ಹೆಸರು ನಾಪತ್ತೆಯಾಗಿವೆ. ಸಿದ್ದರಾಮಯ್ಯ ಕ್ಷೇತ್ರವಾದ ಬಾದಾಮಿಯಲ್ಲಿ 14830 ಮತದಾರ ಹೆಸರು ನಾಪತ್ತೆಯಾಗಿದ್ದು, ಮುಧೋಳದಲ್ಲಿ 11,362, ತೇರದಾಳದಲ್ಲಿ 10260, ಜಮಖಂಡಿಯಲ್ಲಿ 5318, ಬೀಳಗಿಯಲ್ಲಿ 6797, ಬಾಗಲಕೋಟೆಯಲ್ಲಿ 8875, ಹುನಗುಂದದಲ್ಲಿ 7512 ಮತದಾರರನ್ನು ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.