ಧಾರವಾಡ: ಬೆಳಗಾವಿಯಲ್ಲಿ ಕನ್ನಡ ಧ್ವಜ ಹಿಡಿದು ಹಾರಾಡಿಸಿದಂತ ವಿದ್ಯಾರ್ಥಿಯ ಮೇಲೆ ಹಲ್ಲೆ ಕುರಿತಂತೆ ತನಿಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಮೂಲಕ ಕನ್ನಡಿಗರ ಮೇಲೆ ಪುಂಡಾಟ ಮೆರೆದಂತ ಪುಂಡರ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚಿಸಿದ್ದಾರೆ.
BIGG NEWS : ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : 2022-23 ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಮೇಲೆ ಹಲ್ಲೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನಾನು ತನಿಖೆ ಕೈಗೊಳ್ಳಲು ಪೋಲಿಸ್ ಆಯುಕ್ತರಿಗೆ ಸೂಚಿಸಿದ್ದು, ವರದಿ ಬಂದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಪೊಲೀಸರು ಹಲ್ಲೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸತ್ಯಾಸತ್ಯತೆಯನ್ನು ತಿಳಿದುಕೊಂಡು ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದರು.
BIG NEWS: ‘ಮತದಾರರ ಪಟ್ಟಿ’ಯಲ್ಲಿ ‘ಅಲ್ಪಸಂಖ್ಯಾತ ಮತದಾರ’ರನ್ನು ಕೈಬಿಟ್ಟಿಲ್ಲ- ಸಿಎಂ ಬೊಮ್ಮಾಯಿ ಸ್ಪಷ್ಟನೆ
ಈಗಾಗಲೇ ರಾಜ್ಯ ಚುನಾವಣೆ ಆಯೋಗ ಈ ಬಗ್ಗೆ ಗಮನ ಹರಿಸಿದೆ. ಚುನಾವಣಾ ಆಯೋಗದ ನೇತೃತ್ವದಲ್ಲಿ ಮತದಾರರನ್ನು ಪಟ್ಟಿ ಪರಿಷ್ಕರಣೆಯಾಗುತ್ತದೆ. ಈ ಕುರಿತು ಭಾರತ ಮತ್ತು ರಾಜ್ಯ ಚುನಾವಣಾ ಆಯೋಗ ಕಾಳಜಿ ವಹಿಸಿದೆ. ಈ ರೀತಿಯ ದೂರುಗಳು ಬಂದಲ್ಲಿ ಅಧಿಕಾರಿಗಳಿಂದ ತನಿಖೆ ಮಾಡಿಸಬೇಕು. ಅನಧಿಕೃತವಾಗಿ ಮತದಾರರನ್ನು ಸೇರಿಸುವ ಕೆಲಸವೂ ಆಗಿದೆ. ಎರಡು ಕಡೆಗಳಲ್ಲಿ ಮತದಾರರ ಚೀಟಿ ಹೊಂದಿರುವವರೂ ಇದ್ದಾರೆ. ಅಂಥವನ್ನು ತೆಗೆಯುವ ಕೆಲಸ ಆಯೋಗ ಮಾಡಬೇಕು. ಯಾವುದೇ ಕಾರಣಕ್ಕೂ ಅಧಿಕೃತ ಜನರಿಗೆ ಮತದಾನದ ಹಕ್ಕು ಇರಲೇಬೇಕು. ಅದನ್ನು ಮೇಲ್ವಿಚಾರಣೆ ಮಾಡುವ ಕೆಲಸ ಚುನಾವಣಾ ಆಯೋಗ ಮಾಡಬೇಕು ಎಂದರು.
ಕನ್ನಡ ಧ್ವಜ ಹಿಡಿದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಪೊಲೀಸರನ್ನು ಅಮಾನತುಗೊಳಿಸಬೇಕು – ಕರವೇ ಪ್ರವೀಣ್ ಶೆಟ್ಟಿ