ಬೆಂಗಳೂರು: ರಾಜ್ಯ ವಿವಿಧ ತಾಲೂಕು ಪಂಚಾಯ್ತಿಯ ವ್ಯಾಪ್ತಿಯ ಶಿಕ್ಷಕರು, ಸಿಬ್ಬಂದಿಗಳ ವೈದ್ಯಕೀಯ ವೆಚ್ಚ ಮರುಪಾವತಿಗೆ ಅಗತ್ಯವಿರುವ ಅನುದಾನವನ್ನು ಸರ್ಕಾರ ಉಪಯೋಗಿಸಿಕೊಳ್ಳಲು ಅನುಮತಿ ನೀಡಿದೆ.
BREAKING: ಇಡಿಯಿಂದ ಛತ್ತೀಸಗಡ ಸಿಎಂ ಭೂಪೇಶ್ ಬಘೇಲ್ ಉಪಕಾರ್ಯದರ್ಶಿ ಬಂಧನ
ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಮುಖ್ಯಲೆಕ್ಕಾಧಿಕಾರಿ ಹಾಗೂ ಆಯುಕ್ತರ ಆರ್ಥಿಕ ಸಲಹೆಗಾರರು ಆದೇಶ ಹೊರಡಿಸಿದ್ದಾರೆ. ವಿವಿಧ ತಾಲೂಕು ಪಂಚಾಯ್ತಿಗಳ ವ್ಯಾಪ್ತಿಯ ಸಾರ್ವಜನಿಕ ಶಿಕ್ಷಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ, ಸಿಬ್ಬಂದಿಗಳ ವೈದ್ಯಕೀಯ ವೆಚ್ಚ ಮರುಪಾವತಿಗೆ ಅನುದಾನ ರೂ.7,849 ಲಕ್ಷಗಳನ್ನು ಬಿಡುಗಡೆಗೊಳಿಸಲಾಗಿರುತ್ತದೆ. ಅದರಂತೆ ಬಿಡುಗಡೆಗೊಳಿಸಲಾಗಿರುವಂತ ಅನುದಾನವನ್ನು ಫಲಾನುಭವಿ ಶಿಕ್ಷಕರ ಮತ್ತು ಸಿಬ್ಬಂದಿಗಳ ವೈದ್ಯಕೀಯ ವೆಚ್ಚಗಳನ್ನು ಕೂಡಲೇ ಭರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
Job Alert: ತಾಲೂಕು ತಾಂತ್ರಿಕ ವ್ಯವಸ್ಥಾಪಕರು, ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ
ಅಂದಹಾಗೇ ದಿನಾಂಕ 08-11-2022ರಂದು ತಾಲೂಕು ಪಂಚಾಯ್ತಿ ವ್ಯಾಪ್ತಿಯ ಸಾರ್ವಜನಿಕ ಶಿಕ್ಷಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಸಿಬ್ಬಂದಿಗಳ ವೈದ್ಯಕೀಯ ವೆಚ್ಚ ಮರು ಪಾವತಿಗಾಗಿ ಅಗತ್ಯವಿರುವಂತ ರೂ.7849 ಲಕ್ಷ ಅನುದಾನವನ್ನು ಸರ್ಕಾರ ಬಿಡುಗಡೆಗೊಳಿಸಿತ್ತು. ಈ ಅನುದಾನವನ್ನು ಇಂದು ಬಳಕೆ ಮಾಡಿಕೊಳ್ಳಲು ಅನುಮತಿಸಿದೆ.