ಬೆಂಗಳೂರು: ಮುಂಬರುವಂತ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ( Karnataka Assembly Election 2023 ) ಈಗಾಗಲೇ ಜೆಡಿಎಸ್ ನಿಂದ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಲಾಗಿದೆ. ಇದೀಗ ಕಾಂಗ್ರೆಸ್ ಪಕ್ಷದಿಂದಲೂ ( Congress Party ) ಶೀಘ್ರವೇ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( KPCC President DK Shivakumar ) ತಿಳಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಹಾರಾಷ್ಟ್ರ ಜತೆಗಿನ ಗಡಿ ವಿವಾದದ ಬಗ್ಗೆ ಮುಖ್ಯಮಂತ್ರಿಗಳ ಮಾತಿಗೆ ಪ್ರಾಮುಖ್ಯತೆ ನೀಡುತ್ತೇನೆ. ಬೇರೆಯವರ ಮಾತಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅವರು ತಮ್ಮ ಪಕ್ಷದಲ್ಲಿ ಆಂತರಿಕ ಒಪ್ಪಂದ ಮಾಡಿಕೊಂಡು, ರಾಜ್ಯದ ಗಂಭೀರ ವಿಚಾರಗಳನ್ನು ಮರೆಮಾಚಲು ಈ ವಿವಾದ ಎಬ್ಬಿಸುತ್ತಿದ್ದಾರೆ.
ಡಿ.6 ರಂದು ಮಹಾರಾಷ್ಟ್ರ ಸಚಿವರು ಬೆಳಗಾವಿ ಜಿಲ್ಲೆಗೆ ಭೇಟಿ ನೀಡುತ್ತಿರುವ ಬಗ್ಗೆ ಸರ್ಕಾರಕ್ಕೆ ಯಾವ ಸಲಹೆ ನೀಡುತ್ತೀರಿ ಎಂದು ಕೇಳಿದಾಗ, ‘ ಸರ್ಕಾರ ನಮ್ಮ ಅಭಿಪ್ರಾಯ ಕೇಳಿದರೆ ನಾವು ಸಲಹೆ ನೀಡಬಹುದು. ಆದರೆ ಅವರು ಪ್ರಮುಖ ವಿಚಾರ ಮರೆಮಾಚಲು ಈ ವಿವಾದ ಬಳಸಿಕೊಳ್ಳುತ್ತಿದ್ದಾರೆ ‘ ಎಂದರು.
ಚುನಾವಣಾ ಸಮಿತಿ ರಚನೆ ಹಾಗೂ ಚುನಾವಣೆ ಟಿಕೆಟ್ ಮೊದಲ ಪಟ್ಟಿ ಬಗ್ಗೆ ಕೇಳಿದ ಪ್ರಶ್ನೆಗೆ, ‘ ಆದಷ್ಟು ಶೀಘ್ರವಾಗಿ ಪಟ್ಟಿ ಬರಲಿದೆ ‘ ಎಂದರು.