ತುಮಕೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆಡಿಎಸ್, ಈಗಾಗಲೇ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿದೆ. ಈ ನಡುವೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.
ಈ ಸಮಯದಲ್ಲಿ ಬೆಳಗಾವಿಗೆ `ಮಹಾ’ ಸಚಿವರು ಬರೋದು ಬೇಡ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ
ಹೌದು, ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ದಲಿತರನ್ನು ಉಪಮುಖ್ಯಮಂತ್ರಿ ಮಾಡುವುದಾಗಿ ಹೇಳಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇದೀಗ ಜೆಡಿಎಸ್ ಗೆ ಬಹುಮತ ಸಿಕ್ಕರೆ ದಲಿತರನ್ನು ಮುಖ್ಯಮಂತ್ರಿ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಗೆ 123 ಸ್ಥಾನ ಬಂದರೆ ದಲಿತರನ್ನು ಮುಖ್ಯಮಂತ್ರಿ ಮಾಡಲು ನಾವು ಸಿದ್ಧರಿದ್ದೇವೆ. ಮೀಸಲು ಇರದಿದ್ದಾಗಲೇ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ದಲಿತರಿಗೆ ಅಧಿಕಾರ ನೀಡಿದ್ದರು. ಇದೀಗ ದಲಿತ ಏಕೆ ಮುಖ್ಯಮಂತ್ರಿ ಆಗಬಾರದು? ದಲಿತರನ್ನು ಸಿಎಂ ಮಾಡಲು ನಾವು ಸಿದ್ಧರಿದ್ದೇವೆ ಎಂದು ತಿಳಿಸಿದ್ದಾರೆ.
ಇನ್ನು ಚುನಾವಣೆಯಲ್ಲಿ ಯಾರೂ ಕೂಡ ಮೈ ಮರೆಯಬಾರದು. ಮನೆ ಮನೆಗೆ ಹೋಗಿ ಪಕ್ಷದ ಕಾರ್ಯಕ್ರಮದ ಬಗ್ಗೆ ವಿವರಣೆ ಕೊಡಬೇಕು. ನಾವು ಮನೆಯಲ್ಲಿ ಕುಳಿತರೂ ನಮಗೆ 50 ಸೀಟ್ ಬರುತ್ತದೆ. ಆದರೆ ನಮಗೆ ಬೇಕಾಗಿರುವುದು ಸಂಪೂರ್ಣ ಬಹುಮತ. ಈ ಬಾರಿ ನಮ್ಮ ಸರ್ಕಾರ ಅಧಿಕಾರಕ್ಕೆ ತರಬೇಕು ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ.