ಬೆಂಗಳೂರು: ಮೈಸೂರಿನ ಟಿ.ನರಸೀಪುರದಲ್ಲಿ ಚಿರತೆ ದಾಳಿಯಿಂದ ( Leopard attack ) ಮೃತಪಟ್ಟ ಕುಟುಂಬದವರಿಗೆ ತಲಾ 15 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು.
ಡಿ.8ರಿಂದ ಮೂರು ದಿನಗಳ ‘ಫ್ಯೂಚರ್ ಡಿಸೈಬ್’ ಸಮಾವೇಶ – ಸಚಿವ ಅಶ್ವತ್ಥ ನಾರಾಯಣ
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು. ಮೊದಲು ಕಾಡುಪಕ್ಕದಲ್ಲಿ ಆಗುತ್ತಿತ್ತು. ಈಗ ಬೆಂಗಳೂರಿನ ಆಸುಪಾಸಿನಲ್ಲಿ ಆಗುತ್ತಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕಳೆದ ಹಲವಾರು ದಿನಗಳಿಂದ ಅದರ ಬೇಟೆಯಾಡಲು ಪ್ರಯತ್ನ ಮಾಡಲಾಗುತ್ತಿದ್ದು ಅದಕ್ಕೆ ಬಲೆಯನ್ನೂ ಹಾಕಲಾಗಿದೆ. ಅದನ್ನು ಜೀವಂತವಾಗಿ ಹಿಡಿದು ಕಾಡಿಗೆ ಬಿಡಲು ಇಲಾಖೆಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ತಮಿಳುನಾಡಿನಾದ್ಯಂತ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿಷೇಧಿಸಿದ ಮದ್ರಾಸ್ ಹೈಕೋರ್ಟ್
ಬೆಂಗಳೂರು ಹಾಗೂ ಮೈಸೂರು ವಲಯದಲ್ಲಿ ಆನೆ ಕಾಡಿದಾರ್ ಸುತ್ತಮುತ್ತ ಚಿರತೆಗಳೂ ಇವೆ. ಚಿರತೆ ದಾಳಿ ಆಗುತ್ತಿರುವುದನ್ನು ತಡೆಯಲು ವಿಶೇಷ ತಂಡವನ್ನು ರಚಿಸಲಾಗಿದ್ದು, ನಿರ್ದಿಷ್ಟವಾಗಿ ಕ್ರಮಕೈಗೊಳ್ಳಲು ತಿಳಿಸಲಾಗಿದೆ. ಅವುಗಳನ್ನು ನಿಯಂತ್ರಿಸಲು ಹಾಗೂ ಕಾಡು ಬಿಟ್ಟು ಆಚೆ ಬಂದಿರುವ ಚಿರತೆಗಳನ್ನು ಹಿಡಿಯಲು ತಂಡ ಕಾರ್ಯಾಚರಣೆ ಮಾಡಲಿದೆ ಎಂದರು.
ಮಾದಪ್ಪನ ಹಾಡನ್ನು ಕೆಟ್ಟದಾಗಿ ಬಿಂಬಿಸಿದಾಗ ಎಲ್ಲಿಗೆ ಹೋಗಿತ್ತು ನಿಮ್ಮ ಬುದ್ದಿ ನಟ ರಿಷಬ್ ಶೆಟ್ಟಿ ಜನತೆ ಪ್ರಶ್ನೆ