ಬೆಂಗಳೂರು: ಕಳೆದ ಎರಡು ದಿನಗಳ ಹಿಂದಷ್ಟೇ ಅರಣ್ಯ ಇಲಾಖೆಯ ( Forest Department ) ಅಧಿಕಾರಿಗಳು, ಸಿಬ್ಬಂದಿಗಳ ವರ್ಗಾವಣೆಗೆ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಬ್ರೇಕ್ ಹಕಿದ್ದರು. ಈ ಬೆನ್ನಲ್ಲೇ ಆರೋಗ್ಯ ಇಲಾಖೆಯ ( Karnataka Health Department ) ಅಧಿಕಾರಿಗಳು, ಸಿಬ್ಬಂದಿಗಳ ವರ್ಗಾವಣೆಗೂ ( Transfer ) ಬ್ರೇಕ್ ಹಾಕಿದ್ದಾರೆ.
BREAKING: ಮಧುಗಿರಿಯ ಕೊಡಿಗೇನಹಳ್ಳಿಯಲ್ಲಿ ಬಾಲಕ ಸಾವು ಪ್ರಕರಣ: ಕೆಲಸದಿಂದ ಆಂಬುಲೆನ್ಸ್ ಚಾಲಕ ವಜಾ
ಈ ಸಂಬಂಧ ಟಿಪ್ಪಣಿಯನ್ನು ಹೊರಡಿಸಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಯಾವುದೇ ವರ್ಗಾವಣೆ ಪ್ರಸ್ತಾವನೆಗಳನ್ನು ಮುಂದಿನ ಸೂಚನೆಯವರೆಗೆ ಸಿಎಂ ಅವರ ಸಚಿವಾಲಯಕ್ಕೆ ಮಂಡಿಸದಂತೆ ಸೂಚಿಸಿದ್ದಾರೆ.
BREAKING: ಮಧುಗಿರಿಯ ಕೊಡಿಗೇನಹಳ್ಳಿಯಲ್ಲಿ ಬಾಲಕ ಸಾವು ಪ್ರಕರಣ: ಕೆಲಸದಿಂದ ಆಂಬುಲೆನ್ಸ್ ಚಾಲಕ ವಜಾ
ಅಂದಹಾಗೇ ಈಗಾಗಲೇ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮುಕ್ತಾಯಗೊಂಡಿತ್ತು. ಹೀಗಿದ್ದೂ ವರ್ಗಾವಣೆಗಾಗಿ ಅರಣ್ಯ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಸಿಎಂ ಕಚೇರಿಗೆ ವರ್ಗಾವಣೆ ಕೋರಿದಂತ ಪ್ರಸ್ತಾವನೆಗಳನ್ನು ಸಲ್ಲಿಸಲಾಗುತ್ತಿತ್ತು. ಈ ಹಿನ್ನಲೆಯಲ್ಲಿ ಈಗ ಸಿಎಂ ಬೊಮ್ಮಾಯಿ ಅರಣ್ಯ ಇಲಾಖೆ ಬೆನ್ನಲ್ಲೇ, ಆರೋಗ್ಯ ಇಲಾಖೆ ವರ್ಗಾವಣೆಗೂ ಬ್ರೇಕ್ ಹಾಕಿದ್ದಾರೆ.