ಚಿಕ್ಕಮಗಳೂರು : ಮಾಜಿ ಸಿಎಂ ಸಿದ್ದರಾಮಯ್ಯಗೆ ಶಾಸಕ ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್ ಎಂಬ ಹೇಳಿಕೆ ನೀಡಿದ್ದು, ಇದಕ್ಕೆ ಕಾಂಗ್ರೆಸ್ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ.
ಇದೀಗ ಸಿ.ಟಿ ರವಿ ಹೇಳಿಕೆ್ಗೆ ಸಚಿವ ಅಶ್ವತ್ ನಾರಾಯಣ್ ಸಮರ್ಥನೆ ನೀಡಿದ್ದು, ಸಿದ್ದರಾಮಯ್ಯ ಸಿದ್ರಾಮುಲ್ಲಾ ಖಾನ್ ಎಂದು ಇಡೀ ಜಗತ್ತಿಗೆ ಗೊತ್ತಿದೆ. ಸಿದ್ದರಾಮಯ್ಯ ಸಿದ್ರಾಮುಲ್ಲಾ ಖಾನ್ ಎಂದು ಹೆಸರು ಬದಲಿಸುವುದು ಒಳಿತು, ಈ ವಿಚಾರ ಇಟ್ಟುಕೊಂಡು ಸಿಟಿ ರವಿ ಮನೆಗೆ ಮುತ್ತಿಗೆ ಹಾಕುವುದು ಸರಿಯಲ್ಲ ಎಂದು ಕಿಡಿಕಾರಿದರು.
ಇನ್ನೂ, ಶಾಸಕ ಸಿ.ಟಿ. ರವಿ ಸಿದ್ರಾಮುಲ್ಲಾಖಾನ್ ಹೇಳಿಕೆ ಖಂಡಿಸಿ ಇಂದು ಕಾಂಗ್ರೆಸ್ ನ ನೂರಾರು ಕಾರ್ಯಕರ್ತರು ಸಿ.ಟಿ. ರವಿ ವಿರುದ್ಧ ಘೋಷಣೆ ಕೂಗುತ್ತ. ಚಿಕ್ಕಮಗಳೂರಿನ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಸಿ.ಟಿ. ರವಿ ಮನೆಗೆ ಮುತ್ತಿಗೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರು ತಡೆದಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆಗೆ ಕೌಂಟರ್ ಕೊಡಲು ಬಂದ ಬಿಜೆಪಿ ಕಾರ್ಯಕರ್ತರೂ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತನಿಗೆ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Teacher Job: ಅರೆಕಾಲಿಕ ಶಿಕ್ಷಕರು, ಬೋಧಕರ ನೇಮಕಾತಿಗೆ ಅರ್ಜಿ ಆಹ್ವಾನ