ಬೆಂಗಳೂರು: ನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಚುನಾವಣಾ ಉಸ್ತುವಾರಿಯಾಗಿದ್ದಂತ ಐಎಎಸ್ ಅಧಿಕಾರಿ ರಂಗಪ್ಪ ಅವರು, ಇಂದು ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ಅಲ್ಲದೇ ಅಕ್ರಮದಲ್ಲಿ ತಮ್ಮ ಯಾವುದೇ ಪಾತ್ರವಿಲ್ಲ ಎಂಬುದಾಗಿ ಪೊಲೀಸರ್ ವಿಚಾರಣೆ ವೇಳೆ ತಿಳಿಸಿದ್ದಾರೆ ಎನ್ನಲಾಗಿದೆ.
ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ ಬಸವರಾಜ ಬೊಮ್ಮಾಯಿ ಅವರೇ?: ಟ್ವಿಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ
ಇಂದು ಹಲಸೂರು ಗೇಟ್ ಪೊಲೀಸ್ ಠಾಣೆಯ ವಿಚಾರಣಾಧಿಕಾರಿ ಮುಂದೆ ಹಾಜರಾದಂತ ಐಎಎಸ್ ಅಧಿಕಾರಿ ರಂಗಪ್ಪ ಅವರಿಗೆ, ತನಿಖಾಧಿಕಾರಿಗಳು ಸರ್ವೆ ನಡೆಸಲು ಆರ್ ಓ ಗಳಿಗೆ ಯಾರು ಅನುಮತಿ ಕೊಟ್ಟಿದ್ದು ಎಂದು ಪ್ರಶ್ನಿಸಿದ್ದಾರೆ. ಆದ್ರೇ ತಾವು ಆರ್ ಓ ಗಳಿಗೆ ಸರ್ವೆ ನಡೆಸಲು ಯಾವುದೇ ಅನುಮತಿ ನೀಡಿಲ್ಲ. ಈ ಅಕ್ರಮಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಅಂಗವಿಕಲರಿಗೆ ಭರ್ಜರಿ ಗುಡ್ ನ್ಯೂಸ್: ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ, ವಸತಿ ಯೋಜನೆಯಲ್ಲಿ ಶೇ.2ರಷ್ಟು ಮೀಸಲಾತಿ
ಈ ಹಿನ್ನಲೆಯಲ್ಲಿ ದಾಖಲೆ ಸಹಿತ ಮತ್ತೆ ವಿಚಾರಣೆಗೆ ಡಿಸೆಂಬರ್ 7ರಂದು ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿ ಕಳುಹಿಸಿದ್ದಾರೆ ಎನ್ನಲಾಗಿದೆ. ಇದೇ ಪ್ರಕರಣದಲ್ಲಿ ಅನಾರೋಗ್ಯದಿಂದ ಹಾಜರಾಗದಂತ ಮಹದೇವಪುರ ಕ್ಷೇತ್ರದ ಚುನಾವಣಾ ಉಸ್ತುವಾರಿ ಅಧಿಕಾರಿ ಶ್ರೀನಿವಾಸ್ ಗೂ ಡಿ.7ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರೋದಾಗಿ ತಿಳಿದು ಬಂದಿದೆ.
ಅಂದಹಾಗೇ ಶಿವಾಜಿನಗರ, ಚಿಕ್ಕಪೇಟೆ ಚುನಾವಣಾ ಉಸ್ತುವಾರಿಯಾಗಿದ್ದಂತ ಐಎಎಸ್ ಅಧಿಕಾರಿ ರಂಗಪ್ಪ ಅವರ ವಿರುದ್ಧ ಚುನಾವಣಾ ಆಯೋಗವು ತನಿಖೆಗೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿಯೇ ಇಂದು ವಿಚಾರಣೆಗಾಗಿ ತನಿಖಾಧಿಕಾರಿ ಮುಂದೆ ಅವರು ಹಾಜರಾಗಿದ್ದರು.
‘ದ್ವಿತೀಯ PUC ಪರೀಕ್ಷಾ ಶುಲ್ಕ’ ಸಂದಾಯದ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ದಿನಾಂಕ ವಿಸ್ತರಣೆ