ಬೆಂಗಳೂರು : ಕುಖ್ಯಾತ ರೌಡಿ ಬೆತ್ತನಗೆರೆ ಶಂಕರನನ್ನು ಬಿಜೆಪಿ ಸಂಸದ ಪ್ರತಾಪ ಸಿಂಹ ಪಕ್ಷಕ್ಕೆ ಸ್ವಾಗತಿಸಿದ್ದು, ಕಾಂಗ್ರೆಸ್ ಇದರ ಫೋಟೋವನ್ನು ಟ್ವೀಟ್ ಮೂಲಕ ಹಂಚಿಕೊಂಡಿದೆ.
ರೌಡಿ ಬೆತ್ತನಗೆರೆ ಶಂಕರನನ್ನು ಬಿಜೆಪಿ ಸಂಸದ ಪ್ರತಾಪ ಸಿಂಹ ಅವರು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡಿರುವ ಫೋಟೊವನ್ನು ಕಾಂಗ್ರೆಸ್ ಹಂಚಿಕೊಂಡಿದೆ. ಈ ವಿಚಾರವನ್ನು ಟ್ವೀಟ್ ಮೂಲಕ ಬಹಿರಂಗಪಡಿಸಿದೆ.
ರೌಡಿಗಳನ್ನು ಬಿಜೆಪಿ ಸೇರಿಸಿಕೊಳ್ಳುವುದಿಲ್ಲ ಎನ್ನುತ್ತಿರುವ ಬಿಜೆಪಿ ನಾಯಕರು ಮತ್ತೊಂದೆಡೆ ರೌಡಿಗಳ ಪಕ್ಷ ಸೇರ್ಪಡೆ ಅಭಿಯಾನವನ್ನೇ ನಡೆಸುತ್ತಿದೆ. ಬೆತ್ತನಗೆರೆ ಶಂಕರ ಎಂಬ ರೌಡಿ ಶೀಟರ್ನನ್ನು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡದ್ದಾರೆ ಸಂಸದ ಪ್ರತಾಪ್ ಸಿಂಹ ಅವರೇ ರೌಡಿರಾಜ್ಯ ಕಟ್ಟಲು ಹೊರಟಿದ್ದೀರಾ? ಇದೇನಾ ನಿಮ್ಮ ಸಂಸ್ಕೃತಿ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಇನ್ನೊಂದು ಟ್ವೀಟ್ ನಲ್ಲಿ ಸಿಎಂ ಬೊಮ್ಮಾಯಿಯವರು ದಮ್ಮು, ತಾಕತ್ತು ಇದ್ರೆ ಬನ್ನಿ ಎಂದು ರೌಡಿಸಂ ಭಾಷೆಯಲ್ಲಿ ಸವಾಲು ಹಾಕಿದ್ದರ ಹಿಂದೆ ನೈಜ ರೌಡಿಸಂ ಇದೆ ಎಂದು ಈಗ ಬೆಳಕಿಗೆ ಬರುತ್ತಿದೆ. ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ..ಬೊಮ್ಮಾಯಿ ಅವರೇ ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ, ಬೊಮ್ಮಾಯಿಯವರು ರೌಡಿಗಳಿಗೆ ಮಹಾಗುರುವಿನಂತೆ ಆಗಿದ್ದಾರೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ರೌಡಿಗಳನ್ನು ಬಿಜೆಪಿ ಸೇರಿಸಿಕೊಳ್ಳುವುದಿಲ್ಲ ಎನ್ನುತ್ತಿರುವ ಬಿಜೆಪಿ ನಾಯಕರು ಮತ್ತೊಂದೆಡೆ ರೌಡಿಗಳ ಪಕ್ಷ ಸೇರ್ಪಡೆ ಅಭಿಯಾನವನ್ನೇ ನಡೆಸುತ್ತಿದೆ.
ಬೆತ್ತನಗೆರೆ ಶಂಕರ ಎಂಬ ರೌಡಿ ಶೀಟರ್ನನ್ನು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡದ್ದಾರೆ ಸಂಸದ @mepratap.@BSBommai ಅವರೇ, ರೌಡಿರಾಜ್ಯ ಕಟ್ಟಲು ಹೊರಟಿದ್ದೀರಾ? ಇದೇನಾ ನಿಮ್ಮ ಸಂಸ್ಕೃತಿ. pic.twitter.com/WPCnxj8TQ7
— Karnataka Congress (@INCKarnataka) December 3, 2022
ಸಿಎಂ ಬೊಮ್ಮಾಯಿಯವರು ದಮ್ಮು, ತಾಕತ್ತು ಇದ್ರೆ ಬನ್ನಿ ಎಂದು ರೌಡಿಸಂ ಭಾಷೆಯಲ್ಲಿ ಸವಾಲು ಹಾಕಿದ್ದರ ಹಿಂದೆ ನೈಜ ರೌಡಿಸಂ ಇದೆ ಎಂದು ಈಗ ಬೆಳಕಿಗೆ ಬರುತ್ತಿದೆ.
ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ @BSBommai ಅವರೇ?
ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ, ಬೊಮ್ಮಾಯಿಯವರು ರೌಡಿಗಳಿಗೆ ಮಹಾಗುರುವಿನಂತೆ ಆಗಿದ್ದಾರೆ. pic.twitter.com/4JWUGPxeF5
— Karnataka Congress (@INCKarnataka) December 3, 2022
BREAKING NEWS: ಕಂಟೇನರ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ: ನೆಲಮಂಗಲ ಬಳಿ ರಾ.ಹೆ.48ರಲ್ಲಿ ಟ್ರಾಫಿಕ್ ಜಾಮ್
SHOCKING : ಮಹಿಳೆಯನ್ನು ಲಾರಿ ಅಡಿ ತಳ್ಳಿದ ಭೂಪ : ಎರಡು ಭಾಗವಾದ ದೇಹ, ಬೆಚ್ಚಿಬಿದ್ದ ಜನ