ಬೆಂಗಳೂರು: ಬೆಂಗಳೂರು ವಿವಿಯಿಂದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಸ್ನಾತಕೋತ್ತರ ಪದವಿ ವ್ಯಾಸಂಗ ಕುರಿತಂತೆ ಹೊರಡಿಸಲಾದ ಸುತ್ತೋಲೆ ಈಗ ವಿವಾದಕ್ಕೆ ಕಾರಣವಾಗಿದೆ. ಇಂತಹ ಸುತ್ತೋಲೆ ಹೊರಡಿಸಿದಂತ ಬೆಂಗಳೂರು ವಿಶ್ವವಿದ್ಯಾಲಯ ಕುಲಸಚಿವರ ಅಮಾನತಿಗೆ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗ ಉಪಾಧ್ಯಕ್ಷ ರಮೇಶ್ ಬಾಬು ಒತ್ತಾಯಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಬೆಂಗಳೂರು ವಿಶ್ವ ವಿದ್ಯಾನಿಲಯ 2022-23ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಎರಡನೇ ಸ್ನಾತಕೋತ್ತರ ಪದವಿಗೆ ಕಡ್ಡಾಯವಾಗಿ ಅವಕಾಶ ನೀಡಬಾರದೆಂದು ಈ ದಿನ ಸುತ್ತೋಲೆ ಹೊರಡಿಸಿರುತ್ತಾರೆ . ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವರ ಸೂಚನೆಗೆ ಅನುಗುಣವಾಗಿ ಈ ಸುತ್ತೋಲೆಯನ್ನು ಹೊರಡಿಸಲಾಗಿದ್ದು ಬಿಜೆಪಿ ಯು ದಲಿತರ ವಿರೋಧಿ ಮತ್ತು ದಲಿತರ ವ್ಯಾಸಂಗಕ್ಕೆ ಅಡ್ಡಿಪಡಿಸುವ ಮನಸ್ಥಿತಿಯನ್ನು ಮತ್ತೊಮ್ಮೆ ವ್ಯಕ್ತಪಡಿಸುವುದರ ಮೂಲಕ ತನ್ನ ಹಿಡನ್ ಅಜೆಂಡಾ ಜಾರಿಗೊಳಿಸಿದೆ ಎಂದಿದ್ದಾರೆ.
‘ದ್ವಿತೀಯ PUC ಪರೀಕ್ಷಾ ಶುಲ್ಕ’ ಸಂದಾಯದ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ದಿನಾಂಕ ವಿಸ್ತರಣೆ
ಶತ ಶತಮಾನಗಳಿಂದ ಶೋಷಣೆ ಮತ್ತು ತುಳಿತಕ್ಕೆ ಒಳಗಾಗಿರುವ ದಲಿತ ಸಮುದಾಯದಲ್ಲಿ ಇಂದಿಗೂ ಸ್ನಾತಕೋತ್ತರ ಮತ್ತು ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಜನಸಂಖ್ಯಾನುಪಾಟಕ್ಕೆ ಅನುಗುಣವಾಗಿ ಇರುವುದಿಲ್ಲ. ಸರ್ಕಾರದ ಎಲ್ಲಾ ರೀತಿಯ ಬೆಂಬಲ ಮತ್ತು ಸಹಾಯದ ನಡುವೆಯೂ ಸ್ನಾತಕೋತ್ತರ ಹಾಗೂ ಉನ್ನತ ವ್ಯಾಸಂಗಕ್ಕೆ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುತ್ತದೆ. ಸರ್ಕಾರದ ನೀತಿ ಮತ್ತು ನಿರೂಪಣೆಗಳು ಯಾವತ್ತೂ ದಲಿತ ವರ್ಗದ ಪರವಾಗಿ ಇರಬೇಕಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು ವೋಟರ್ ಐಡಿ ಪರಿಷ್ಕರಣೆ ಅಕ್ರಮ: ವಿಚಾರಣೆಗೆ ಹಾಜರಾದ ಐಎಎಸ್ ಅಧಿಕಾರಿ ರಂಗಪ್ಪ
ಬೆಂಗಳೂರು ವಿಶ್ವ ವಿದ್ಯಾಲಯವು ರಾಜ್ಯ ಬಿಜೆಪಿ ಸರ್ಕಾರದ ಒತ್ತಡಕ್ಕೆ ಮಣಿದು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ನಿಲಯಗಳಲ್ಲಿ ದಲಿತ ವರ್ಗದ ವಿದ್ಯಾರ್ಥಿಗಳಿಗೆ ಒಮ್ಮೆ ಮಾತ್ರ ಸೌಲಭ್ಯದ ಅವಕಾಶವನ್ನು ಕಲ್ಪಿಸಿ, ಎರಡನೇ ಸ್ನಾತಕೋತ್ತರ ಪದವಿಗೆ ವಿದ್ಯಾರ್ಥಿ ನಿಲಯದ ಅವಕಾಶ ದೊರಕದಂತೆ ಹೊರಡಿಸಿರುವ ಸುತ್ತೋಲೆ ಅಕ್ರಮ ಮತ್ತು ದಲಿತ ವಿರೋಧಿ ನೀತಿಯಾಗಿರುತ್ತದೆ. ಈ ದಿನ ಬೆಂಗಳೂರು ವಿಶ್ವ ವಿದ್ಯಾನಿಲಯದ ಕುಲ ಸಚಿವರು ಹೊರಡಿಸಿರುವ ದಲಿತ ವಿರೋಧಿ ಸುತ್ತೋಲೆಯನ್ನು ಬೆಂಗಳೂರು ವಿಶ್ವ ವಿದ್ಯಾಲಯ ಕೂಡಲೇ ಹಿಂದಕ್ಕೆ ಪಡೆಯಬೇಕು. ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರ ಮತ್ತು ಉನ್ನತ ಶಿಕ್ಷಣ ಸಚಿವರು ದಲಿತ ಧಮನಕಾರಿಯಾ ನೀತಿಗಳನ್ನು ಕೈಬಿಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷ ಒತ್ತಾಯಿಸುತ್ತದೆ. ವಿಶ್ವ ವಿದ್ಯಾಲಯದಲ್ಲಿ ದಲಿತ ಧಮನಕಾರಿಯಾ ಸುತ್ತೋಲೆಯನ್ನು ಹೊರಡಿಸಿರುವ ಕುಲಸಚಿವರನ್ನು ಅಮಾನತುಗೊಳಿಸಲು ಕಾಂಗ್ರೆಸ್ ಪಕ್ಷದ ಪರವಾಗಿ ಈ ಮೂಲಕ ಒತ್ತಾಯಿಸಿದ್ದಾರೆ.