ಬೆಂಗಳೂರು : ತಾಕತ್ ಇದ್ದರೆ ನನ್ನ ಮುಂದೆ ಗೋಮಾಂಸ ತಿನ್ನಿ ನೋಡೋಣ, ನಿಮ್ಮನ್ನು ಒಳಗೆ ಹಾಕಿಸ್ತೀನಿ ಎಂದು ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆಗೆ ಸಚಿವ ಪ್ರಭು ಚೌಹಾಣ್ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನ ವಿಕಾಸಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ನನ್ನ ಮುಂದೆ ಹಂದಿ ತಿಂತೀನಿ, ಹಸು ತಿಂತೀನಿ ಎಂದು ಹೇಳುತ್ತೀರಲ್ಲಾ.. ತಾಕತ್ ಇದ್ದರೆ ಗೋಮಾಂಸ ತಿನ್ನಿ ನೋಡೋಣ, ನಿಮ್ಮನ್ನು ಒಳಗೆ ಹಾಕಿಸ್ತೀನಿ ಎಂದು ಸಿದ್ದು-ಖರ್ಗೆಗೆ ತಿರುಗೇಟು ನೀಡಿದರು. ನಮ್ಮ ಸರ್ಕಾರ ಬಂದರೆ, ಗೋ ಹತ್ಯೆ ನಿಷೇಧ ಕಾಯಿದೆ ತೆಗೆದು ಹಾಕುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.
ಗೋಹತ್ಯೆ ಆರೋಪಿಗಳಿಗೆ 2 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ
ಗೋಹತ್ಯೆ ಆರೋಪಿಗಳಿಗೆ 2 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ.ಯಿಂದ 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.
ಇಂದು ವಿಕಾಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಪ್ರಭು ಚೌಹ್ಹಾಣ್ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯಿದೆ ಜಾರಿಗೆ ಬಂದ ಮೇಲೆ ಗೋವುಗಳ ಹತ್ಯೆ ಸಂಖ್ಯೆ ಇಳಿಕೆಯಾಗುತ್ತಿದೆ, ಕಾನೂನು ಉಲ್ಲಂಘಿಸಿ ಗೋಹತ್ಯೆ ಎಸಗುವ ಆರೋಪಿಗಳಿಗೆ 50 ಸಾವಿರ ರೂ.ಯಿಂದ 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.
ರಾಜ್ಯದಲ್ಲಿ 1964ರಿಂದಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿತ್ತು, ಆಗ ಗೋಹತ್ಯೆಗೆ 1 ಸಾವಿರ ದಂಡ, 6 ತಿಂಗಳು ಜೈಲು ಶಿಕ್ಷೆ ಇತ್ತು. ಈಗ ಕಾಯ್ದೆ ತಿದ್ದುಪಡಿ ಮಾಡಿದ್ದೇವೆ, ಆರೋಪಿಗಳಿಗೆ 2 ರಿಂದ 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ.ಯಿಂದ 10 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.
ನಾನು ರೌಡಿ ನಾಗನ ಪರ ಎನ್ನುವುದಕ್ಕೆ ದಾಖಲೆ ಕೊಡಿ : ಬಿಜೆಪಿಗೆ ರಾಮಲಿಂಗಾ ರೆಡ್ಡಿ ಸವಾಲ್