ಬೆಂಗಳೂರು: ಆರೋಗ್ಯ ಸೇವೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದಂತ ರಾಜ್ಯ ಸರ್ಕಾರ ಬಿಬಿಎಂಪಿಯ 243 ವಾರ್ಡ್ ಗಳು ಸೇರಿದಂತೆ ರಾಜ್ಯದ ಒಟ್ಟು 438 ಕಡೆ ನಮ್ಮ ಕ್ಲಿನಿಕ್ ( Namma Clinic ) ಆರಂಭಿಸಲು ತೀರ್ಮಾನಿಸಲಾಗಿದೆ.
ಬೆಂಗಳೂರಿನಲ್ಲಿ ಮೊದಲ ಹಂತದಲ್ಲಿ 108 ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 100 ನಮ್ಮ ಕ್ಲಿನಿಕ್ ಗೆ ಸಿಎಂ ಬಸವರಾಜ ಬೊಮ್ಮಾಯಿ ಶೀಘ್ರವೇ ಏಕಕಾಲಕ್ಕೆ ಚಾಲನೆ ನೀಡಲಿದ್ದಾರೆ ಎನ್ನಲಾಗಿದ್ದು, ಶೀಘ್ರವೇ ಕಾರ್ಯಕ್ರಮದ ದಿನಾಂಕ ಘೋಷಿಸಲಾಗುತ್ತದೆ ಎಂದು ಹೇಳಲಾಗಿದೆ.
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ನಮ್ಮ ಕ್ಲಿನಿಕ್ ಆರಂಭಕ್ಕೆ ಎದುರಾಗಿರುವ ವೈದ್ಯರ ಕೊರತೆ ನೀಗಿಸಲು ಒಂದು ವರ್ಷದ ಕಡ್ಡಾಯ ಸರ್ಕಾರಿ ಸೇವೆ ನಿಯಮದಡಿ ಎಂಬಿಬಿಎಸ್ ಮುಗಿಸಿದ ವೈದ್ಯರ ಬಳಕಗೆ ಬಿಬಿಎಂಪಿ ಮುಂದಾಗಿದೆ. ನಮ್ಮ ಕ್ಲಿನಿಕ್ ಗಳು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.30ರವರೆಗೆ ಕಾರ್ಯನಿರ್ವಹಿಸುತ್ತಿವೆ. ಈ ಕ್ಲಿನಿಕ್ ಗಳಲ್ಲಿ ಒಬ್ಬ ಡಾಕ್ಟರ್, ಒಬ್ಬ ನರ್ಸ್, ಒಬ್ಬ ಲ್ಯಾಬ್ ಟೆಕ್ನೀಷಿಯನ್ ಹಾಗೂ ಒಬ್ಬ ಡಿ ಗ್ರೂಪ್ ಸಿಬ್ಬಂದಿ ಕಾರ್ಯನಿರ್ವಹಿಸುತ್ತಾರೆ. ಇಲ್ಲಿ ತಪಾಸಣೆ ಬಳಿಕ, ಉಚಿತ ಔಷಧ ವಿತರಣೆ ಮಾಡಲಾಗುತ್ತದೆ.
BIGG NEWS : ‘ಖಾಸಗಿ ಅನುದಾನಿತ ಪ್ರೌಢ ಶಾಲೆ’ಗಳ ನೇರ ನೇಮಕಾತಿ, ಮುಂಬಡ್ತಿಗೆ ರಾಜ್ಯ ಸರ್ಕಾರದಿಂದ ತಡೆ