ಬೆಂಗಳೂರು : ಬೆಳಗಾವಿಯಲ್ಲಿ ಡಿ. 19 ರಿಂದ 10 ದಿನಗಳ ಕಾಲ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರವು ಗಡಿ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ.
First Text Message : ಮೊದಲ ‘SMS’ಗೆ 30 ವರ್ಷ…. ಮೆಸೇಜ್ ಮಾಡೋ ಪ್ರಕ್ರಿಯೆ ಶುರುವಾಗಿದ್ದು ಹೇಗೆ, ಎಲ್ಲಿ ಗೊತ್ತಾ?
ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರವು ಗಡಿ ಜಿಲ್ಲೆಗಳ ಅಭಿವೃದ್ಧಿ ಬಂಪರ್ ಕೊಡುಗೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಅದರಲ್ಲೂ ಬೆಳಗಾವಿ ಜಿಲ್ಲೆಯ ಗಡಿ ಭಾಗಕ್ಕೆ ಹೆಚ್ಚಿನ ಘೋಷಣೆ ಮಾಡು ಸಾಧ್ಯತೆ ಇದೆ. ಈ ಮೂಲಕ ಮಹಾರಾಷ್ಟ್ರಕ್ಕೆ ತಿರುಗೇಟು ನೀಡಲು ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ.
ಇನ್ನು ಬೆಳಗಾವಿ ಜಿಲ್ಲೆಯ ಗಡಿಯ ಜೊತೆಗೆ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕದ ಗಡಿ ಭಾಗದ ಅಭಿವೃದ್ಧಿಗೂ ವಿಶೇಷ ಘೋಷಣೆ ಮಾಡುವ ಸಂಬಂಧ ಈಗಾಗಲೇ ಸರ್ಕಾರದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದ್ದು, ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
Rain in karnatka : ರಾಜ್ಯದ ಜನತೆಗೆ ಮತ್ತೊಂದು ಶಾಕ್ : ರಾಜ್ಯಾದ್ಯಂತ ನಾಳೆಯಿಂದ ಮತ್ತೆ ಮಳೆ ಅಬ್ಬರ ಶುರು!