ನವದೆಹಲಿ: ಇಂದು ನಡೆದ ಕಾಂಗ್ರೆಸ್ ಪಕ್ಷದ ಸಂಚಾಲನಾ ಸಮಿತಿ ಸಭೆಯಲ್ಲಿ ನಡೆದಿದ್ದು, ಪಕ್ಷದ ಸರ್ವಸದಸ್ಯರ ಅಧಿವೇಶನ ನಡೆಸುವುದು ಹಾಗೂ ಭಾರತ್ ಜೋಡೋ ಯಾತ್ರೆಯ ಭವಿಷ್ಯದ ಕ್ರಮಗಳ ಕುರಿತಂತೆ ಚರ್ಚೆ ನಡೆಸಲು ಕ್ರಮ ಕೈಗೊಳ್ಳುವುದಾಗಿ ಸದಸ್ಯರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.
BIG NEWS: ಜನಾರ್ಧನ ರೆಡ್ಡಿ ಮೊಮ್ಮಗಳ ನಾಮಕರಣಕ್ಕೆ ಸಚಿವ ಶ್ರೀರಾಮುಲು ಗೈರು: ರೆಡ್ಡಿ ಬ್ರದರ್ಸ್ ನಡುವೆ ಬಿರುಕು?
ಇದರ ಜೊತೆಗೆ ಜನವರಿ 26 ರಿಂದ ‘ಹತ್ ಸೆ ಹತ್ ಜೋಡೋ ಅಭಿಯಾನ’ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಅಭಿಯಾನ ಎರಡು ತಿಂಗಳ ಸುದೀರ್ಘ ಕಾಲ ನಡೆಸಲಿದೆ ಎಂದು ಪಕ್ಷ ತಿಳಿಸಿದೆ.
ಕಾಂಗ್ರೆಸ್ ಸರ್ವಸದಸ್ಯರ ಅಧಿವೇಶನ ಫೆಬ್ರವರಿಯ ದ್ವಿತೀಯಾರ್ಧದಲ್ಲಿ ಛತ್ತೀಸ್ಗಢದ ರಾಯ್ಪುರದಲ್ಲಿ 3 ದಿನಗಳ ಅಧಿವೇಶನ ನಡೆಯಲಿದೆ ಎಂದು ಕಾಂಗ್ರೆಸ್ ಸಂಸದ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.
ಸಂಸತ್ ಚಳಿಗಾಲದ ಅಧಿವೇಶನಕ್ಕೆ ರಾಹುಲ್ ಗಾಂಧಿ ಗೈರು
ಸಂಚಾಲನಾ ಸಮಿತಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ವೇಣುಗೋಪಾಲ್ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ತೊಡಗಿರುವ ಕಾರಣ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.
ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೇರಿಸಲು ನಿರ್ಧಾರ : ಸಿಎಂ ಬೊಮ್ಮಾಯಿ