ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ಅವರಿಗೆ ಬೆಂಗಳೂರು ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
BIGG NEWS: ಕರ್ನಾಟಕದ ಎಚ್ಚರಿಕೆಗೆ ಮಣಿದ ಮಹಾರಾಷ್ಟ್ರ; ಬೆಳಗಾವಿಗೆ ಸಚಿವರ ಭೇಟಿ ರದ್ದು
ಇಂದು ವಿವಿಯಲ್ಲಿ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. 57ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆದಿದ್ದು, ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ವಿಶ್ವವಿದ್ಯಾಲಯದ ಅನುದಾನ ಆಯೋಗದ ಅಧ್ಯಕ್ಷ ಪ್ರೊ.ಎಂ.ಜಗದೀಶ್, ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಭಾಗವಹಿಸಿದ್ದರು.
BIGG NEWS: ಕರ್ನಾಟಕದ ಎಚ್ಚರಿಕೆಗೆ ಮಣಿದ ಮಹಾರಾಷ್ಟ್ರ; ಬೆಳಗಾವಿಗೆ ಸಚಿವರ ಭೇಟಿ ರದ್ದು
ಘಟಿಕೋತ್ಸವದಲ್ಲಿ ಚಿತ್ರ ನಟ ದ್ವಾರಕೀಶ್, ಖ್ಯಾತ ಕಲಾವಿದ ಅಮರನಾಥ್ ಗೌಡ, ಸಮಾಜ ಸೇವಕ ಡಾ.ಟಿ. ಅನಿಲ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. 34337 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. 300 ಚಿನ್ನದ ಪದಕ, 73 ನಗದು ಬಹುಮಾನ, 267 ಅಭ್ಯರ್ಥಿಗಳಿಗೆ ಡಾಕ್ಟರೇಟ್ ಪ್ರದಾನ ಮಾಡಲಾಯಿತು.