ಕೊಪ್ಪಳ : ಡಿಸೆಂಬರ್ 13 ರಂದು ಕೊಪ್ಪಳದಲ್ಲಿ ನಡೆಯಲಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉದ್ಯೋಕಾಂಕ್ಷೀಗಳು ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗ ಮೇಳವನ್ನು ಡಿಸೆಂಬರ್ 13 ರಂದು ಬೆಳಿಗ್ಗೆ 10 ರಿಂದ 05 ಗಂಟೆಯವರೆಗೆ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಉದ್ಯೋಗ ಮೇಳದಲ್ಲಿ ಕೈಗಾರಿಕೆ, ಕೃಷಿ, ಫಾರ್ಮಾ, ಹೆಲ್ತ್ ಸೆಕ್ಟರ್, ಬ್ಯಾಕಿಂಗ್, ಫೈನಾನ್ಸಿಯಲ್ಸ್ಗೆ ಸಂಬAಧಿಸಿದ ವಿವಿಧ ಕ್ಷೇತ್ರಗಳನ್ನೊಳಗೊಂಡ ಉದ್ಯೋಗದಾತರು, ಸುಮಾರು 25 ರಿಂದ 30 ಕಂಪನಿಗಳು ಭಾಗವಹಿಸಲಿದ್ದು, 1000 ಜನರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೊಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆವುಳ್ಳ ಉದ್ಯೋಕಾಂಕ್ಷೀಗಳು ದಾಖಲಾತಿಗಳೊಂದಿಗೆ ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಕಾಂಕ್ಷೀಗಳು ನೋಂದಣಿಗಾಗಿ ಇಲಾಖೆಯಿಂದ ಸೃಜಿಸಲಾಗಿರುವ ಗೂಗಲ್ ಫಾರಂ(https://docs.google.com/forms/d/e/1FAIpQLSeqmoeWqI_oi2khKcskoayche0SxPkJqqdIwySNaL0XtzI2aQ/viewform?vc=0&c=0&w=1&flr=0) ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
‘ಸಿದ್ರಾಮುಲ್ಲಾ ಖಾನ್’ ಎಂದು ಜನರೇ ಕರೆಯುತ್ತಿದ್ದಾರೆ : ಟ್ವೀಟ್ ನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯ