ಬೆಂಗಳೂರು: ರಾಜ್ಯ ಸರ್ಕಾರದಿಂದ 2021ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಹಾಗೂ 2022 ನೇ ಸಾಲಿನ ಕ್ರೀಡಾ ಪೋಷಕ ಪ್ರಶಸ್ತಿ ಪ್ರಕಟಮಾಡಿದೆ. ಈ ಬಾರಿ 15 ಸಾಧಕರಿಗೆ ಏಕಲವ್ಯ ಹಾಗೂ ಮೂವರಿಗೆ ಜೀವಮಾನ ಸಾಧನೆಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
BIGG NEWS : ಇಂದಿನಿಂದ `ದತ್ತ ಜಯಂತಿಗೆ’ ಚಾಲನೆ : ಪ್ರವಾಸಿಗರ ನಿರ್ಬಂಧ, 4,500 ಪೊಲೀಸರ ನಿಯೋಜನೆ
ಈ ಕುರಿತಂತೆ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪಟ್ಟಿಯನ್ನು ಪ್ರಕಟಿಸಲಾಗಿದೆ. 2021ನೇ ಸಾಲಿನ ಏಕಲವ್ಯ ಪ್ರಶಸ್ತಿಯನ್ನು ಅಥ್ಲೆಟಿಕ್ಸ್ ಕ್ರೀಡಾಪಟು ಚೇತನ್ ಬಿ ಸೇರಿದಂತೆ 15 ಮಂದಿ ಸಾಧಕರಿಗೆ ನೀಡಲಾಗಿರುವುದಾಗಿ ತಿಳಿಸಿದೆ.
Good News : ರಾಜ್ಯದ ಜನತೆಗೆ ಸಿಎಂ ಬೊಮ್ಮಾಯಿ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ 437 `ನಮ್ಮ ಕ್ಲಿನಿಕ್’ಗೆ ಚಾಲನೆ
ಅಂದಹಾಗೇ ಕ್ರೀಡಾ ಸಾಧಕರಿಗೆ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪ್ರಶಸ್ತಿಯಲ್ಲಿ ಏಕಲವ್ಯ ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗಳು ಒಂದಾಗಿವೆ. ಇಂತಹ ಪ್ರಶಸ್ತಿಯನ್ನು ನಾಳೆ ರಾಜಭವನದ ಗಾಜಿನಮನೆಯಲ್ಲಿ ನಡೆಯುವಂತ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.
ಈ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
ಈ ಕೆಳಕಂಡಂತಿದೆ ಪ್ರಶಸ್ತಿ ಪುರಸ್ಕೃತರ ಪಟ್ಟಿ