ರಾಯಚೂರು : ರಾಯಚೂರು ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸಾರಿಗೆ ಬಸ್ -ಬೈಕ್ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
BREAKING NEWS : ಹಾಲಿವುಡ್ ಜನಪ್ರಿಯ ನಟಿ ʻಕಿರ್ಸ್ಟಿ ಅಲ್ಲೆʼ ಕ್ಯಾನ್ಸರ್ನಿಂದ ನಿಧನ | Kirstie Alley
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಬಳಿ ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಬೈಕ್ ಸವಾರರು ಮೃತಪಟ್ಟಿದ್ದಾರೆ. ಮೃತರನ್ನು ನಾಗರಾಜು (25), ಸೀನು (30) ಮತ್ತು ಜಯಪಾಲ (30) ಎಂದು ಗುರುತಿಸಲಾಗಿದ್ದು, ಶ್ರೀಕಾಂತ ಕರ್ನೂಲು ಎಂಬುವರಿಗೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಭತ್ತ ಕಟಾವು ಮಾಡಲು ಯಂತ್ರದ ಸಮೇತ ಮಸ್ಕಿಗೆ ಬಂದಿದ್ದ ನಾಲ್ವರು, ನಿನ್ನೆ ರಾತ್ರಿ ಗುಡದೂರಿಗೆ ಒಂದೇ ಬೈಕ್ ನಲ್ಲಿ ನಾಲ್ವರು ಪ್ರಯಾಣ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.