ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ರಾಜ್ಯದಲ್ಲಿ ನಾಳೆಯಿಂದ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
BIGG NEWS: ಸಿಲಿಕಾನ್ಸಿಟಿಯಲ್ಲಿ ಡೈಮಂಡ್ ಆಮಿಷವೊಡ್ಡಿ ವಂಚನೆಗೆ ಯತ್ನಿಸಿದ್ದ ಮೂವರು ಆರೋಪಿಗಳು ಅರೆಸ್ಟ್
ದಕ್ಷಿಣ ಒಳನಾಡು ಜಿಲ್ಲೆಯ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.ಹಾಗೆ ನಾಳೆಯಿಂದ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ.ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ದಾವಣಗೆರೆ, ಬಳ್ಳಾರಿ, ಹಾಸನ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.
BIGG NEWS: ಸಿಲಿಕಾನ್ಸಿಟಿಯಲ್ಲಿ ಡೈಮಂಡ್ ಆಮಿಷವೊಡ್ಡಿ ವಂಚನೆಗೆ ಯತ್ನಿಸಿದ್ದ ಮೂವರು ಆರೋಪಿಗಳು ಅರೆಸ್ಟ್
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಹ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯಿಂದ ನಾಲ್ಕು ದಿನ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯಾಗಲಿದೆ. ಉತ್ತರ ಒಳನಾಡಿನ ಭಾಗದಲ್ಲಿ ಮುಂದಿನ ಐದು ದಿನವು ಒಣಹವೆ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.