ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.
BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಬೆಳಗಾವಿಯಲ್ಲಿ `ಕರವೇ’ ಬಹಿರಂಗ ಸಭೆ
ನಗರದಲ್ಲಿ ಮಾತನಾಡಿದ ಅವರು, ಬಹಳ ವರ್ಷದಿಂದ ಗಡಿ ವಿವಾದ ಮಾಡಿಕೊಂಡು ಬಂದಿದ್ದಾರೆ. ಕರ್ನಾಟಕ- ಮಾಹಾರಾಷ್ಟ್ರ ಜನರ ನಡುವೆ ಸಾಮರಸ್ಯ ಇದೆ. ಸುಪ್ರೀಂಕೋರ್ಟ್ ನಲ್ಲೂ ನಮ್ಮ ಪರ ತೀರ್ಪು ಬರುವ ವಿಶ್ವಾಸವಿದೆ. ಜನರ ರಕ್ಷಣೆಗೆ ನಾವು ಬದ್ಧವಾಗಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಬೆಳಗಾವಿಯಲ್ಲಿ `ಕರವೇ’ ಬಹಿರಂಗ ಸಭೆ
ಇನ್ನು ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದಲ್ಲಿ ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರದ ಎಂ.ಇ.ಎಸ್. ಮಹಾರಾಷ್ಟ್ರ ರಾಜಕಾರಣಿಗಳ ವಿರುದ್ಧ ಕರವೇ ಕಿಡಿಕಾರಿದ್ದು, ಇಂದು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಬಹಿರಂಗ ಸಭೆ ನಡೆಸಲಿದೆ. ಇಂದು ಕರ್ನಾಟಕ ರಕ್ಷಣಾ ವೇದಿಕೆ ಬಹಿರಂಗ ಸಭೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಾದ್ಯಂತ ಪೊಲೀಸ್ ಬಿಗ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಡಿಸಿಪಿ, ನಾಲ್ವರು ಸಿಪಿಐ, 10 ಪಿಎಸ್ ಐ, 12 ಕೆಎಸ್ ಆರ್, 8 ಸಿಎಆರ್ ತುಕಡಿಗಳು ಹಾಗೂ ಅಶ್ರುವಾಯು ಪ್ರಯೋಗ ವರುಣಾ ವಾಹನ ನಿಯೋಜನೆ ಮಾಡಲಾಗಿದೆ.