ಬೆಂಗಳೂರು: ನಗರದಲ್ಲಿನ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಲಾಗಿತ್ತು. ಈ ಅಮಾನತು ಆದೇಶವನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
BIGG NEWS: ರಾಜ್ಯದಲ್ಲಿ ಸಿದ್ದರಾಮಯ್ಯಗೆ ಯಾವ ಕ್ಷೇತ್ರವೇ ಇಲ್ಲದಂತಾಗಿದೆ; ಕೆ.ಎಸ್.ಈಶ್ವರಪ್ಪ ವ್ಯಂಗ್ಯ
ಈ ಕುರಿತಂತೆ ಇಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿರುವಂತ ಅವರು, ತಾವು ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲದೇ ಇದ್ದರೂ ತಮ್ಮನ್ನು ಅಮಾನತುಗೊಳಿಸಿದ್ದಾರೆ. ತಮ್ಮ ಅಮಾನತು ಆದೇಶವನ್ನು ತೆರವುಗೊಳಿಸುವಂತೆ ಕೋರಿದ್ದಾರೆ. ಈ ಹಿನ್ನಲೆಯಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹಾಗೂ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ.
ಅಂದಹಾಗೇ ಹೈಕೋರ್ಟ್ ಗೆ ಸಲ್ಲಿಸಿರುವಂತ ಅಮಾತುಗೊಂಡಿರುವಂತ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು, ಅಕ್ರಮದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಅಕ್ರಮಕ್ಕೂ ತಮಗೂ ಯಾವುದೇ ಸಂಬಂಧವಿಲ್ಲವೆಂದು ತಿಳಿಸಿದ್ದಾರೆ. ಅಲ್ಲದೇ ಯಾವುದೇ ಕಾರಣವಿಲ್ಲದೇ ತಮ್ಮನ್ನು ಅಮಾನತಗೊಳಿಸಿದ್ದಾರೆ. ಕೇವಲ ಸಿಇಸಿ ಸೂಚನೆ ಮೇರೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಹೀಗಾಗಿ ತಮ್ಮ ಅಮಾನತು ಆದೇಶವನ್ನು ರದ್ದುಪಡಿಸಿವಂತೆ ಮನವಿ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ನಾಳೆಗೆ ಹೈಕೋರ್ಟ್ ನಿಗದಿಪಡಿಸಿದೆ.