ದಾವಣಗೆರೆ: ಪ್ರಸಕ್ತ 2022-23ನೇ ಸಾಲಿನಲ್ಲಿ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿ ಹಾಲು ಉತ್ಪಾದಕರಿಗೆ ಉತ್ತೇಜನ ಕಾರ್ಯಕ್ರಮದ ಉಳಿಕೆ ಅನುದಾನದಲ್ಲಿ ಹಸು/ಎಮ್ಮೆ ಹಾಗೂ ಕುರಿ/ಮೇಕೆ ಘಟಕಗಳ ಅನುಷ್ಠಾನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ರವರಿಂದ ಅರ್ಜಿ ನಮೂನೆ ಪಡೆದು ಎಲ್ಲಾ ದಾಖಲಾತಿಗಳೊಂದಿಗೆ ಡಿಸೆಂಬರ್ 22 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ಆಯಾ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ)ರವರ ಕಚೇರಿ ಅಥವಾ ದೂ.ಸಂ ದಾವಣಗೆರೆ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿ ಮೊ.ಸಂ: 9353567572, ಚನ್ನಗಿರಿ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿ ಮೊ.ಸಂ: 9880961745, ಹರಿಹರ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿ ಮೊ.ಸಂ: 9900369113, ಹೊನ್ನಾಳಿ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿ ಮೊ.ಸಂ: 9480506320, ನ್ಯಾಮತಿ ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿ ಮೊ.ಸಂ: 9632916405, ಜಗಳೂರು ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿ ಮೊ.ಸಂ: 9901641942 ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.