ಚಿತ್ರದುರ್ಗ : ಜಿಲ್ಲಾ ಕುಷ್ಟರೋಗಿ ನಿವಾರಣಾಧಿಕಾರಿ ಡಾ ರೂಪಾ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ರೂಪಾ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅನುಮಾನ ಮೂಡಿದೆ.
ರೂಪಾ ಮೊನ್ನೆ ಕಾಲು ಜಾರಿ ಬಿದ್ದಿ ತಲೆಗೆ ತೀವ್ರ ಪೆಟ್ಟು ಬಿದ್ದ ಹಿನ್ನೆಲೆ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು, ಆದ್ರೆ ಅವರ ಮನೆಯಲ್ಲಿ ಪಿಸ್ತೂಲ್ ಪತ್ತೆಯಾಗಿದ್ದರಿಂದ ಶೂಟ್ ಮಾಡಿಕೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ರೂಪಾ ಸಾವಿನ ಹಿಂದೆ ಹತ್ತು ಹಲವು ಅನುಮಾನಗಳು ಹುಟ್ಟಿದೆ.
ಇನ್ನೂ, ಘಟನೆ ಕುರಿತು ಹೆಚ್ಚಿನ ತನಿಖೆಗೆ ಬೆಂಗಳೂರಿನಿಂದ ವಿಧಿ ವಿಜ್ಞಾನ ತಂಡವನ್ನು ಕರೆಸಲಾಗಿದ್ದು, ಶವ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಚಿತ್ರದುರ್ಗ ಎಸ್ ಪಿ ಪರಶುರಾಮ್ ಸ್ಥಳಕ್ಕೆ ಪರಿಶೀಲನೆ ನಡೆಸಿ ಘಟನೆ ಕುರಿತು ಮಾಹಿತಿ ಕಲೆಹಾಕಿದ್ದಾರೆ.
BIGG NEWS: 33 ವಾರಗಳ ಗರ್ಭಧಾರಣೆಯ ಮುಕ್ತಾಯಕ್ಕೆ ಅನುಮತಿ ನೀಡಿದ ಹೈಕೋರ್ಟ್