ಶಿರಸಿ : ಶಿರಸಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ಘೋಷಣೆ ಮಾಡುವ ಸುಳಿವನ್ನು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೀಡಿದ್ದಾರೆ.
ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಕಾರ್ಮಿಕರ ರಾಜ್ಯ ವಿಮಾ ಚಿಕಿತ್ಸಾಲಯದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಈ ಕುರಿತು ಮಾತನಾಡಿದರು.
ಭೌಗೋಳಿಕವಾಗಿ ವಿಸ್ತಾರವಾದ ಜಿಲ್ಲೆಯಲ್ಲಿ ಅಭಿವೃದ್ದಿ ದೃಷ್ಟಿಯಲ್ಲಿ ಪ್ರತ್ಯೇಕ ಜಿಲ್ಲೆಯಾಗಿಸುವ ಕುರಿತು ಜನಾಭಿಪ್ರಾಯವನ್ನು ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದ್ದು, ಶಿರಸಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡುವಂತೆ ಆಗ್ರಹಿಸಿ ಭಾರೀ ಹೋರಾಟಗಳು ನಡೆದಿದೆ.
ಅನುಸೂಯ ಜಯಂತಿ : ದತ್ತಪೀಠದಲ್ಲಿ ಸಾವಿರಾರು ಮಹಿಳೆಯರಿಂದ ದತ್ತಾತ್ರೇಯನ ದರ್ಶನ