ಬೆಂಗಳೂರು: ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗರ ವೃಂದದ ಹುದ್ದೆಯನ್ನು ಗ್ರಾಮ ಆಡಳಿತ ಅಧಿಕಾರಿ ( Village Administrative Officer ) ಎಂದು ಪುನರ್ ಪದನಾಮೀಕರಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಕಂದಾಯ ಇಲಾಖೆಯ ( Revenue Department ) ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿಯನ್ನು ಹೊರಡಿಸಿದ್ದಾರೆ. ಆ ಪ್ರತಿ “ಕನ್ನಡ ನ್ಯೂಸ್ ನೌ”ಗೆ ಲಭ್ಯವಾಗಿದ್ದು, ಅದರಲ್ಲಿ ಕಂದಾಯ ಇಲಾಖೆಯಲ್ಲಿನ ಗ್ರಾಮಲೆಕ್ಕಿಗರ ( Village Account – VA ) ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆ ಇಲ್ಲದೇ ಗ್ರಾಮ ಲೆಕ್ಕಿಗರು ಎಂಬ ಪದನಾಮವನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಮರು ಪದನಾಮೀಕರಿಸಿ ಆದೇಶಿಸಿದ್ದಾರೆ.
BIG NEWS : TMC ನಾಯಕ ಸಾಕೇತ್ ಗೋಖಲೆ ಬಂಧನ ಖಂಡಿಸಿದ ಸಿಎಂ ಬ್ಯಾನರ್ಜಿ; ಪ್ರಧಾನಿ ವಿರುದ್ಧ ವಾಗ್ದಾಳಿ
ಇನ್ನೂ ಕಂದಾಯ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಗ್ರಾಮಲೆಕ್ಕಿಗರ ಹುದ್ದೆಗೆ ಅನ್ವಯಿಸುವಂತೆ ಸೂಕ್ತ ತಿದ್ದುಪಡಿ ತರಲು ಪ್ರತ್ಯೇಕವಾಗಿ ಕ್ರಮವಹಿಸಲಾಗುವುದು ಎಂದು ಹೇಳಿದ್ದಾರೆ.