ಬೆಳಗಾವಿ : ಕರ್ನಾಟಕದ ಬಸ್ ಗಳ ಮೇಲೆ ಮಸಿ ಬಳಿದು ಶಿವಸೇನೆ ಪುಂಡರು ಪುಂಡಾಟ ಮೆರೆದಿದ್ದು, ಕೃತ್ಯ ಖಂಡಿಸಿ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಹಾಪುಂಡರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಹಾಪುಂಡರ ವಿರುದ್ಧ ಪ್ರತಿಭಟನೆ ನಡೆಸಿದ್ದು, ಟೈರ್ ಗೆ ಬೆಂಕಿ ಹಚ್ಚಿ ‘ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಬೆಳಗಾವಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ಮಹಾರಾಷ್ಟ್ರ ಸಚಿವರು ಕ್ಯಾತೆ ತೆಗೆದಿದ್ದು, ಇಂದು ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಹಾರಾಷ್ಟ್ರ ನೊಂದಣಿಯ 5 ಲಾರಿಗಳ ಮೇಲೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಶಿವನೇನೆ ಕಾರ್ಯಕರ್ತರು ಪುಣೆಯ ಡಿಪೋದಲ್ಲಿದ್ದ 8 KSRTC ಬಸ್ ಗಳ ಗಾಜುಗಳನ್ನು ಪುಡಿ ಮಾಡಿದ್ದಾರೆ. ಅಲ್ಲದೇ ಬಸ್ ಗಳ ಮೇಲೆ ಮಸಿ ಬಳಿದು ಜೈ ಮಹಾರಾಷ್ಟ್ರ ಎಂದು ಬರೆದು ಪುಂಡಾಟ ಮೆರೆದಿದ್ದಾರೆ.
ಇದರಿಂದಾಗಿ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಶಿವಸೇನೆ ಪುಂಡರ ಗಲಭೆ ಹಿನ್ನೆಲೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಬೆಳಗಾವಿಯ ಹಿರೇಬಾಗೇವಾಡಿ ಬಳಿಯ ಹೆದ್ದಾರಿಯಲ್ಲಿ ಕರವೇ ಕಾರ್ಯಕರ್ತರು ಮಹಾರಾಷ್ಟ್ರ ವಿರುದ್ಧ ಘೋಷಣೆ ಕೂಗಿ, ಮಹಾರಾಷ್ಟ್ರದಿಂದ ಬರುತ್ತಿರುವ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕೆಲವೊಂದು ಲಾರಿಗಳ ಮೇಲೆ ಕಪ್ಪು ಮಸಿ ಬಳಿದು ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.ಕರ್ನಾಟಕದ ಬೆಳಗಾವಿಗೆ ಮಹಾರಾಷ್ಟ್ರ ಸಚಿವರು ಭೇಟಿ ನೀಡುವುದಾಗಿ ಹೇಳಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರೊಚ್ಚಿಗೆದಿದ್ದು, ಬೆಳಗಾವಿ ನಮ್ಮದು. ಎಂದು ಘೋಷಣೆ ಕೂಗುತ್ತ ಮಹಾರಾಷ್ಟ್ರದ 5 ಲಾರಿಗಳ ಮೇಲೆ ಕಲ್ಲು ತೂರಾಟ ಮಾಡಿದ್ದರು.