ಚಾಮರಾಜನಗರ : ಚಾಮರಾಜನಗರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಪತ್ನಿಯ ಶವ ಸಂಸ್ಕರಕ್ಕೆ ಹಣವಿಲ್ಲದೇ ಪತಿ ಪತ್ನಿಯ ಶವವನ್ನು ಪ್ಲಾಸ್ಟಿಕ್ ಮೂಟೆಯಲ್ಲಿ ಇಟ್ಟು ಸಾಗಿಸಿರುವ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕಂದಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ಪಾಳು ಬಿದ್ದಿರುವ ಮನೆಯಲ್ಲಿ ರವಿ ಹಾಗೂ ಕಾಳಮ್ಮ ಎಂಬ ದಂಪತಿ ವಾಸವಾಗಿದ್ದರು. ರವಿ ಹಾಗೂ ಕಾಳಮ್ಮ ದಂಪತಿ ಪ್ಲಾಸ್ಟಿಕ್ ಆಯುವ ಕೆಲಸ ಮಾಡುತ್ತಿದ್ದರು.
ರವಿ ಹಾಗೂ ಕಾಳಮ್ಮ ಇಬ್ಬರೂ ಮದ್ಯ ವ್ಯಸನಿಗಳಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಕಾಳಮ್ಮ ಸೋಮವಾರ ರಾತ್ರಿ ಮೃತಪಟ್ಟಿದ್ದಾಳೆ. ಆದರೆ ಅಂತ್ಯ ಸಂಸ್ಕಾರಕ್ಕೆ ಹಣವಿಲ್ಲದ ಪತಿ ರವಿ ಕಾಳಮ್ಮ ಶವವನ್ನು ಪ್ಲಾಸ್ಟಿಕ್ ಮೂಟೆಯಲ್ಲಿ ಹಾಕಿಕೊಂಡು ಹೆಗಲ ಮೇಲೆ ಸಾಗಿಸುತ್ತಿದ್ದ ವೇಳೆ ಸ್ಥಳೀಯರು ಗಮನಿಸಿ ಪೊಲೀಸರು ಮಾಹಿತಿ ನೀಡಿದ್ದಾರೆ. ಇದೀಗ ಶವವನ್ನು ಮರಣೋತ್ತರ ಪರಿಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.