ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ನಾಸಿಕ್ ನಗರದಲ್ಲಿರುವ ಕರ್ನಾಟಕ ಬ್ಯಾಂಕಿನ ಬೋರ್ಡ್ ಗೆ ಕಪ್ಪು ಮಸಿ ಬಳಿಯಲಾಗಿದೆ.
ಸ್ವರಾಜ್ಯ ಸಂಘಟನಾ ಎಂಬ ಕಾರ್ಯಕರ್ತರು ಈ ಕೃತ್ಯ ಎಸಗಿದ್ದು, ಕರ್ನಾಟಕ ವಿರುದ್ಧ ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ. ಕರ್ನಾಟಕದ ವಿರುದ್ಧ ಶರದ್ ಪವಾರ್ ನೇತೃತ್ವದ ಎನ್ ಸಿಪಿ ತನ್ನ ಪ್ರತಿಭಟನೆಯನ್ನು ಮುಂದುವರಿಸಿದೆ.
ಇನ್ನು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಶಿವಸೇನೆ, ನವನಿರ್ಮಾಣ ಸೇನೆ ಕಾರ್ಯಕರ್ತರು ಮತ್ತೆ ಪುಂಡಾಟಿಕೆ ಮುಂದುವರೆಸಿದ್ದು, ತಡರಾತ್ರಿ ಕೆಎಸ್ ಆರ್ ಟಿಸಿ ಬಸ್ ಗಳಿಗೆ ಮಸಿ ಬಳಿದಿದ್ದಾರೆ. ಇದೀಗ ಗಡಿಯಲ್ಲಿ ಮತ್ತಷ್ಟು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಮಹಾರಾಷ್ಟ್ರಕ್ಕೆ ತೆರಳುವ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.ಸಿಎಂ ಏಕನಾಥ್ ಶಿಂಧೆ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದಾರೆ