ಬೆಂಗಳೂರು : ಮುಸ್ಲಿಂ ಸಮುದಾಯಕ್ಕೆ ನಾನು ಮಾಡಿರುವ ಕೆಲಸ ಗುರುತಿಸಿ ನನ್ನನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ್ರೆ ಖುಷಿಯಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ, ನನ್ನನ್ನು ಅನ್ನರಾಮಯ್ಯ, ರೈತ ರಾಮಯ್ಯ, ಕನ್ನಡ ರಾಮಯ್ಯ, ದಲಿತ ರಾಮಯ್ಯ ಎಂದೆಲ್ಲಾ ಜನರು ನನ್ನನ್ನು ಕರೆಯುತ್ತಾರೆ. ಮುಸ್ಲಿಂ ಸಮುದಾಯಕ್ಕೆ ನಾನು ಮಾಡಿರುವ ಕೆಲಸ ಗುರುತಿಸಿ ನನ್ನನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದ್ರೆ ಖುಷಿಯಾಗುತ್ತದೆ ಎಂದು ಹೇಳಿದ್ದಾರೆ.
ಶೂನ್ಯ ಸಾಧನೆ, ಭ್ರಷ್ಟಾಚಾರ, ಅನಾಚಾರಗಳನ್ನು ಮಸಿ ಬಳೆದುಕೊಂಡಿದ್ದಾರೆ. ಇಂತಹ ಮುಖ ಇಟ್ಟುಕೊಂಡು ಮತಯಾಚನೆ ಮಾಡಲು ಸಾಧ್ಯವೇ?ನನ್ನ ಹೆಸರಿಗೆ ಸಿದ್ರಾಮುಲ್ಲಾ ಖಾನ್ ಸೇರಿಸಿದ್ದಕ್ಕೆ ಬೇಸರ ಇಲ್ಲ. ಇದು ಅವರ ಸೋಲು, ಹತಾಶೆ ಮತ್ತು ಅಸಹಾಯಕತೆಯನ್ನು ತೋರಿಸುತ್ತೆ. ಮುಸ್ಲಿಂ ಕುಟುಂಬದಲ್ಲಿ ಹುಟ್ಟಿ ಗೋವಿಂದ ಭಟ್ಟರ ಶಿಷ್ಯಾನಾದ ಶಿಶುನಾಳ ಷರೀಫರ ಪರಂಪರೆ ನಮ್ಮದು ಎಂದು ಹೇಳುವ ಮೂಲಕ ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.