ತುಮಕೂರು : ಬಡವರಿಗೆ ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಯೋಜನೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಯಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ತುಮಕೂರಿನ ಕುಣಿಗಲ್ ನಲ್ಲಿ ಇಂದು ನಡೆಯುತ್ತಿರುವ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದರು.
ನಮ್ಮ ಸರ್ಕಾರ ಕಣ್ಣಿನ ಚಿಕಿತ್ಸೆಗೆ ಯೋಜನೆ ರೂಪಿಸಿದೆ, ಈ ಯೋಜನೆ ಜನವರಿಯಲ್ಲಿ ಚಾಲನೆಗೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು. ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಈ ಯೋಜನೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಯಾಗಿದೆ ಎಂದು ಬೊಮ್ಮಾಯಿ ಹೇಳಿದರು. ಜನಸಂಕಲ್ಪ ಯಾತ್ರೆ ನಮ್ಮ ನಿರೀಕ್ಷೆ ಮೀರಿ ಮುನ್ನುಗ್ಗುತ್ತಿದೆ, ಎಲ್ಲೆಡೆ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದರು.
ಕಾಂಗ್ರೆಸ್ ವಿರುದ್ಧ ಗುಡುಗಿದ ಬೊಮ್ಮಾಯಿ ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್ ಆಗಿದೆ.ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ನ್ನು ಬಿಜೆಪಿ ಕ್ಲೀನ್ ಸ್ವಿಪ್ ಮಾಡಲಿದೆ.
ರಾಜ್ಯದ ಜನರನ್ನು ದಾರಿ ತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ, ಜಾತಿ ಆಧಾರಿತವಾಗಿ ವೋಟ್ ಕೇಳುತ್ತಿದೆ, ಸಿದ್ದರಾಮಯ್ಯ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಯಲ್ಲಿ ತಲೆದಿಂಬು ವಿತರಣೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಸಿಎಂ ಬೊಮ್ಮಾಯಿ ಗುಡುಗಿದ್ದಾರೆ.ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕಣ್ಣಿನ ಆಪರೇಷನ್ ( Eye Operation ) ಮಾಡಿಸಲಾಗುತ್ತದೆ. ಅಲ್ಲದೇ ಉಚಿತ ಕನ್ನಡಕವನ್ನು ಕೂಡ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj ) ಇತ್ತೀಚೆಗೆ ಹೇಳಿದ್ದರು.
BIGG NEWS: ಬೆಂಗಳೂರಿನಲ್ಲಿ ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ
‘ಭ್ರಷ್ಟಾಚಾರದ ಗಂಗೋತ್ರಿ ಕಾಂಗ್ರೆಸ್’ : ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಗುಡುಗು