ಗದಗ: ಗದಗದಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ ಬೆಳಕಿಗೆ ಬಂದಿದ್ದು, ಹುಡ್ಕೋ ಕಾಲೋನಿಯಲ್ಲಿ ಯುವಕನ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.
ಹುಡ್ಕೋ ಕಾಲೋನಿಯಲ್ಲಿ ಅವಿನಾಶ್ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಗಾಯಾಳುವನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆಲವು ದಿನಗಳ ಹಿಂದೆ ಗದಗದಲ್ಲಿ ಮೂವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿತ್ತು. ಈ ಘಟನೆ ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿತ್ತು. ಘಟನೆ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಗದಗದಲ್ಲಿ ದುಷ್ಕರ್ಮಿಗಳ ಅಟ್ಟಹಾಸಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ.
BREAKING NEWS : ‘ಪಾರಿವಾಳ’ ಹಿಡಿಯುವ ಭರದಲ್ಲಿ ದುರಂತ : ಚಿಕಿತ್ಸೆ ಫಲಿಸದೇ ಮತ್ತೋರ್ವ ಬಾಲಕ ಸಾವು
BREAKING NEWS : ‘ಫಲಿಸದ ಪ್ರಾರ್ಥನೆ’ : ಹೈಟೆನ್ಶನ್ ವೈರ್ ತಗುಲಿ ಗಾಯಗೊಂಡಿದ್ದ ಮತ್ತೋರ್ವ ಬಾಲಕ ಸಾವು