ಮಂಡ್ಯ : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 14ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.
ಉದ್ಯೋಗ ಮೇಳದಲ್ಲಿ ಅಂದಾಜು 100ಕ್ಕೂ ಹೆಚ್ಚು ಪ್ರಸಿದ್ಧ ಕಂಪನಿಗಳು ಭಾಗವಹಿಸಲಿದ್ದು, 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರವನ್ನು ksdc.recruitment@gmail.comಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08232-295010, 9164443223, 8152882461 ಸಂಪರ್ಕಿಸಬಹುದಾಗಿದೆ. ಪಿಇಎಸ್ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಬಯಸುವವರು ಹೆಸರು ನೋಂದಾಯಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
BREAKING NEWS : ‘ಫಲಿಸದ ಪ್ರಾರ್ಥನೆ’ : ಹೈಟೆನ್ಶನ್ ವೈರ್ ತಗುಲಿ ಗಾಯಗೊಂಡಿದ್ದ ಮತ್ತೋರ್ವ ಬಾಲಕ ಸಾವು
ಅಪೌಷ್ಟಿಕತೆ ನಿವಾರಣೆ : ಮಕ್ಕಳ ಆರೋಗ್ಯ ತಪಾಸಣೆಗೆ ಸಚಿವ ಸುಧಾಕರ್ ಸೂಚನೆ